ನಿವೃತ್ತಿ ವೇತನ ಮತ್ತು ಪಿಂಚಣಿ ಪರಿಷ್ಕರಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ಮಾಡಲಾಯಿತು. ಸಂಘದ ಅಧ್ಯಕ್ಷ ಶೇಖರ್, ಚನ್ನಮಾದೇಗೌಡ, ಶಿವಸ್ವಾಮಿ ಇತರರು ಇದ್ದರು. 
ಚಾಮರಾಜನಗರ

ಕೇಂದ್ರದ ನೀತಿ ಖಂಡಿಸಿ ನಿವೃತ್ತ ನೌಕರರ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • Retired employees
ಕೊಳ್ಳೇಗಾಲ: ನಿವೃತ್ತಿ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಹಾಗೂ ವಾರ್ಷಿಕವಾಗಿ ನೀಡಲಾಗುತ್ತಿದ್ದ 2 ತುಟ್ಟಿ ಭತ್ಯೆಯನ್ನು ನೀಡಲು ಸಾಧ್ಯವಿಲ್ಲ ಎಂಬ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಕರ್ನಾಟಕ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡ ನಿವೃತ್ತ ನೌಕರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಗ್ರೇಡ್-2 ತಹಸೀಲ್ದಾರ್ ಕುಮಾರ್ ಅವರ ಮೂಲಕ ಪ್ರಧಾನ ಮಂತ್ರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಕರ್ನಾಟಕ ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ಶೇಖರ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿ ಮಾಡುವ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ನಿವೃತ್ತಿ ವೇತನ ಪರಿಷ್ಕರಣೆ ನೀಡದಿರುವ ನಿಲುವನ್ನು ಕೇಂದ್ರ ಸರ್ಕಾರ ತಾಳಿರುವುದು ಖಂಡನೀಯ. ಇದರ ವಿರುದ್ಧವಾಗಿ ನಾವು ಶಾಂತಿಯುತ ಪ್ರತಿಭಟನೆ ನಡೆಸಿದ್ದೇವೆ. ಕೂಡಲೇ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಸಂಘದ ಗೌರವಾಧ್ಯಕ್ಷ ಚನ್ನಮಾದೇಗೌಡ, ಕಾರ್ಯದರ್ಶಿ ಶಿವಸ್ವಾಮಿ, ಮಾಜಿ ಅಧ್ಯಕ್ಷ ಕೆಂಚೇಗೌಡ, ಮಾಜಿ ಖಜಾಂಚಿ ಅಣ್ಣಾದ್ರಯ್ಯ, ಗೌಡಪ್ಪ, ಸಿದ್ದಯ್ಯ, ಎಂ.ಬಸವರಾಜು, ಇಂದ್ರಕುಮಾರ್, ಶ್ರೀನಿವಾಸ್, ಕೆ.ಸಿ.ವೀರಪ್ಪ ಸದಸ್ಯರು ಇದ್ದರು.