ಗುಂಡ್ಲುಪೇಟೆಯಲ್ಲಿ ಅಖಿಲಭಾರತ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ಯುವಘಟಕದ ವತಿಯಿಂದ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿದ್ದಗಂಗಾಶ್ರೀ ಶಿವಕುಮಾರ ಸ್ವಾಮೀಜಿ 119ನೇ ಜಯಂತಿಯನ್ನು ಆಚರಿಸಲಾಯಿತು. ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಮಾಜಿ ನಿರ್ದೇಶಕ ಡಿ.ಮಾದಪ್ಪ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬಿಜೆಪಿ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮುಖಂಡರಾದ ಎಚ್.ವಿ.ಮಂಜುನಾಥ್ ಇದ್ದರು.  
ಚಾಮರಾಜನಗರ

ಭಕ್ತರಿಗೆ ಮೊಸರನ್ನ, ರೈಸ್‌ಬಾತ್ ವಿತರಣೆ

ಎ. ಆರ್. ರಘುರಾಮ
ಗುಂಡ್ಲುಪೇಟೆ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ಯುವಘಟಕದ ವತಿಯಿಂದ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿ 119 ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಶ್ರೀಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ ಪದಾಧಿಕಾರಿಗಳು ಸಾರ್ವಜನಿಕರಿಗೆ ಸಿಹಿ, ಮೊಸರನ್ನ ಹಾಗೂ ರೈಸ್‌ಬಾತ್ ವಿತರಣೆ ಮಾಡಿದರು. ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಮಾಜಿ ನಿರ್ದೇಶಕ ಡಿ.ಮಾದಪ್ಪ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬಿಜೆಪಿ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮುಖಂಡರಾದ ಎಚ್.ವಿ.ಮಂಜುನಾಥ್, ಎಸ್.ಪಿ.ಸುರೇಶ್, ಮಹೇಶ್, ಮಹೇಂದ್ರ, ಬಸವರಾಜು, ಪ್ರಣಯ್, ಕಿರಣ್, ಡಿ.ಬಿ.ಕುಮಾರ್ ಸೇರಿದಂತೆ ಹಲವರು ಇದ್ದರು.