ಸಂಗೀತಾ 
ಚಾಮರಾಜನಗರ

ರಾಜ್ಯಮಟ್ಟದ ಇನ್ಸ್ಪೈರ್ಡ್ ಅವಾರ್ಡ್ ಸ್ಪರ್ಧೆಗೆ ಆಯ್ಕೆ

ಗುಂಡ್ಲುಪೇಟೆ: ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ಇಬ್ಬರು ವಿದ್ಯಾರ್ಥಿಗಳು, ರಾಜ್ಯಮಟ್ಟದ ಇನ್ಸ್ಪೈರ್ಡ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಹುಂಡಿಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ಎಸ್.ವಿದ್ಯಾ ಮತ್ತು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಡಿ.ಸಂಗೀತಾ ಇವರು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ಭಾರತ ಸರ್ಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಆಯೋಜಿಸಿದ್ದ 2023-24ನೇ ಸಾಲಿನ ಜಿಲ್ಲಾಮಟ್ಟದ ಇನ್ಸ್ಪೈರ್ಡ್ ಅವಾರ್ಡ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಇನ್ಸ್ಪೈರ್ಡ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹುಂಡಿಪುರ ಶಾಲೆಯ ಭೌತವಿಜ್ಞಾನ ಶಿಕ್ಷಕ ವೆಂಕಟೇಶ್ ಮತ್ತು ಬಾಲಕಿಯರ ಪ್ರೌಢಶಾಲೆಯ ಜೀವವಿಜ್ಞಾನ ಶಿಕ್ಷಕಿ ಎಸ್.ಆರ್.ಕುಮದವಲ್ಲಿ ಅವರು ಮಾರ್ಗದರ್ಶನದಲ್ಲಿ ಜಿಲ್ಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.