ಯಳಂದೂರು ತಾಲೂಕಿನ ಕೃಷಿ ಇಲಾಖೆ ಕಚೇರಿಯಲ್ಲಿ ಕೃಷಿ ತಾಂತ್ರಿಕ ಅಧಿಕಾರಿ ಎ.ವೆಂಕಟರಂಗಶೆಟ್ಟಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಹಾಯಕ ಕೃಷಿ ನಿರ್ದೇಶಕ ಅಮೃತೇಶ್ವರ, ಕೃಷಿಕ ಸಮಾಜದ ಅಧ್ಯಕ್ಷ ಗೌಡಹಳ್ಳಿ ರವಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಮ್ಮನಪುರ ಮಹೇಶ್ ಇತರರು ಇದ್ದರು.  
ಚಾಮರಾಜನಗರ

ಕೃಷಿ ತಾಂತ್ರಿಕ ಅಧಿಕಾರಿಗೆ ಬೀಳ್ಕೊಡುಗೆ

ಎ. ಆರ್. ರಘುರಾಮ
ಯಳಂದೂರು : ಇಲ್ಲಿನ ಕೃಷಿ ಇಲಾಖೆ ಕಚೇರಿಯಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೃಷಿ ತಾಂತ್ರಿಕ ಅಧಿಕಾರಿ ಎ.ವೆಂಕಟರಂಗಶೆಟ್ಟಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭ ಮಾತನಾಡಿದ ಕೃಷಿಕ ಸಮಾಜದ ಅಧ್ಯಕ್ಷ ಗೌಡಹಳ್ಳಿ ರವಿ, ವೆಂಕಟರಂಗ ಶೆಟ್ಟಿ ಇಲಾಖೆಯಲ್ಲಿ 37 ವರ್ಷ ಉತ್ತಮ ಸೇವೆ ಸಲ್ಲಿಸಿದ್ದು, ರೈತ ಸ್ನೇಹಿಯಾಗಿ ಅವರು ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿಭಾಯಿಸಿದ್ದಾರೆಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮೃತೇಶ್ವರ ಮಾತನಾಡಿ, ವೆಂಕಟರಂಗಶೆಟ್ಟಿ ಅವರು ಸಮಯಕ್ಕೆ ಸರಿಯಾಗಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು ಎಂದು ಹೇಳಿದರು. ಸರ್ಕಾರಿ ನೌಕರರ ಸಂಘ, ಕೃಷಿಕ ಸಮಾಜ, ವಿವಿಧ ಇಲಾಖೆ ನೌಕರರು, ರೈತ ಸಂಘದ ಮುಖಂಡರು ವೆಂಕಟರಂಗಶೆಟ್ಟಿ ಅವರನ್ನು ಸನ್ಮಾನಿಸಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಮ್ಮನಪುರ ಮಹೇಶ್, ಕೃಷಿಕ ಸಮಾಜದ ಉಪಾಧ್ಯಕ್ಷ ಮಲ್ಲಿಕಾರ್ಜುನ, ಬೂದಿತಿಟ್ಟು ನಾಗೇಂದ್ರ, ಹೊನ್ನೂರು ಪ್ರಸನ್ನ, ಸಿದ್ದರಾಜು, ಪ್ರಭುಸ್ವಾಮಿ,
ಶ್ರೀಕಂಠ, ಯರಿಯೂರು ರಾಜಣ್ಣ, ರಾಜೇಂದ್ರಸ್ವಾಮಿ, ಹೊನ್ನೂರು ಪ್ರಕಾಶ್, ಉಮಾಶಂಕರ್, ಮದ್ದೂರು ವಿರೂಪಾಕ್ಷ, ಪ್ರಭು ಇತರರು ಇದ್ದರು.