ಕೊಳ್ಳೇಗಾಲದ ಅರಣ್ಯ ಇಲಾಖೆಯ ಕಾವೇರಿ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸೇವಾ ನಿವೃತ್ತಿ ಹೊಂದಿದ ಡಿಸಿಎಫ್ ಸುರೇಂದ್ರ ಅವರನ್ನು ಗೌರವಿಸಲಾಯಿತು. ಎನ್.ಎಚ್ ಜಗನ್ನಾಥ್, ಭಾಸ್ಕರ್ ಇತರರು ಹಾಜರಿದ್ದರು.  
ಚಾಮರಾಜನಗರ

ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸನ್ಮಾನ

ಕೊಳ್ಳೇಗಾಲ : ಪಟ್ಟಣದ ಅರಣ್ಯ ಇಲಾಖೆಯ ಕಾವೇರಿ ಸಭಾಂಗಣದಲ್ಲಿ ಶನಿವಾರ ಕಾವೇರಿ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ ಸುರೇಂದ್ರ ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಸುರೇಂದ್ರ, ರಾಜ್ಯದ ಅನೇಕ ಕಡೆಗಳಲ್ಲಿ ಕೆಲಸ ಮಾಡಿದ್ದೇನೆ. ಚಾಮರಾಜ ನಗರ ಜಿಲ್ಲೆಯಲ್ಲಿ ಮಾಡಿದ ಕರ್ತವ್ಯ ನನಗೆ ಖುಷಿ ತಂದಿದೆ ಎಂದರು. ಇಲ್ಲಿಯ ಜನ ಹಾಗೂ ಅಧಿಕಾರಿಗಳು ಬಹಳ ಪ್ರೀತಿ, ವಿಶ್ವಾಸ ತೋರಿದ್ದಾರೆ. ನನ್ನ ಅವಧಿಯಲ್ಲಿ ಕರ್ತವ್ಯಕ್ಕೆ ಉತ್ತಮ ಸಹಕಾರ ನೀಡಿದ್ದಾರೆ ಎಂದರು. ಕಾವೇರಿ ವನ್ಯಜೀವಿ ವಿಭಾಗದ ಅಧಿಕಾರಿ ಜಗನ್ನಾಥ್ ಮಾತನಾಡಿ, ನಿವೃತ್ತಿ ಹೊಂದಿರುವ ಸುರೇಂದ್ರ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಕನಕಪುರ ಉಪವಿಭಾಗ ಎಸಿಎಫ್ ನಾಗೇಂದ್ರ ಪ್ರಸಾದ್, ಹನೂರು ಎಸಿಎಫ್ ಮರಿಸ್ವಾಮಿ, ನಿವೃತ್ತ ಎಸಿಎಫ್ ಅಂಕರಾಜು, ಹಾಗೂ ಸಹಾಯಕ ಸಂರಕ್ಷಣಾಧಿಕಾರಿ ಇದ್ದರು.