ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುದೀರ್ಘ ಅವಧಿಯ ಆಡಳಿತ ನಡೆಸಿರುವ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶ್ರೀಮರಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕೊಳ್ಳೇಗಾಲ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸುದೀರ್ಘ ಅವಧಿಯ ಆಡಳಿತ ನಡೆಸಿರುವ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶ್ರೀಮರಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ಚುನಾಯಿತ ಪ್ರಧಾನಿ ಯಾಗಿ ಅತ್ಯಂತ ಹೆಚ್ಚು ದಿನಗಳ ಕಾಲ ಅಧಿಕಾರ ನಡೆಸಿದ ನಾಯಕ ನರೇಂದ್ರ ಮೋದಿ ಅವರಾಗಿದ್ದಾರೆ. ಇವತ್ತಿಗೆ 4399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ದೂರದೃಷ್ಟಿಯ ನಾಯಕತ್ವ ಮತ್ತು ಅಭಿವೃದ್ಧಿಪರ ಆಡಳಿತದಿಂದ ಭಾರತವು ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದ್ದು, ದೇಶದ ಸಮಗ್ರ ಅಭಿವೃದ್ಧಿಗೆ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ಇದಕ್ಕೂ ಮೊದಲು ದೇವಾಲಯದಲ್ಲಿ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಪೂಜೆ ಸಲ್ಲಿಸಲಾಯಿತು. ಬಳಿಕ ಕಾರ್ಯಕರ್ತರು ಶುಭಾಶಯ ವಿನಿಮಯ ಮಾಡಿಕೊಂಡು ಸಂತಸ ವ್ಯಕ್ತಪಡಿಸಿದರು.
ನಗರ ಮಂಡಲ ಅಧ್ಯಕ್ಷ ಬೂದಿತಿಟ್ಟು ಶಿವಕುಮಾರ್, ನಿರಂಜನ್ ರವಿ, ಎಸ್ಸಿ ಮೋರ್ಚಾ ಕಾರ್ಯದರ್ಶಿ ರಾಜಶೇಖರಮೂರ್ತಿ, ಜಿಲ್ಲಾ ಉಪಾಧ್ಯಕ್ಷ ಟಗರಪುರ ರೇವಣ್ಣ, ನಟರಾಜೇಗೌಡ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್, ಒಬಿಸಿ ಜಿಲ್ಲಾ ಉಪಾಧ್ಯಕ್ಷ ರಾಮಶೆಟ್ಟಿ, ಚಿಕ್ಕಮಾದನಾಯಕ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ.ಶೈಲಾ ರಮೇಶ್, ಮಮತಾ ಬದ್ರಿನಾಥ್, ಯುವ ಮೋರ್ಚಾ ಅಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಮಧುಚಂದ್ರ, ರವಿಕುಮಾರ್, ಬಳೆರವಿ, ಜಿಲ್ಲಾ ಬಿಜೆಪಿ ಮಾಜಿ ವಕ್ತಾರ ಬಸವರಾಜಪ್ಪ, ರಾಜೇಶ್ ಇತರರಿದ್ದರು.