ಮರಿಯ ಮಂಗಲ ಗ್ರಾಮಕ್ಕೆ ರೈತ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು. ಸಿದ್ದಪ್ಪ, ಮರಿಯಾಪ್ರಕಾಶ್, ಅಂತೋಣಿ, ಸಬರಿಯಮ್ಮಾಳ್ ಇತರರಿದ್ದರು.  
ಚಾಮರಾಜನಗರ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ರೈತ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ ಒತ್ತಾಯ
ಹನೂರು: ಮರಿಯಮಂಗಲ ಗ್ರಾಮದಲ್ಲಿ ತಲೆದೂರಿರುವ ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ರೈತ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ ಒತ್ತಾಯಿಸಿದರು.
ಮರಿಯಮಂಗಲ ಗ್ರಾಮಕ್ಕೆ ಬುಧವಾರ ಸಂಘಟನೆಯ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಮಾತನಾಡಿದರು.
ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, 3 ತಿಂಗಳಿನಿಂದ ತೀವ್ರವಾಗಿದೆ. ಇದರಿಂದ ಇಲ್ಲಿನ ಜನರು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಇತ್ತೀಚಿಗೆ ಹನೂರಿನಲ್ಲಿ ನಡೆದ ರೈತ ಸಂಘದ ಪ್ರತಿಭಟನೆಯಲ್ಲಿ ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿತ್ತು. ಆದರೆ ಯಾವುದೇ ಕ್ರಮವಾಗಿಲ್ಲ. ಇನ್ನು ಗ್ರಾಮದ ಹೊರವಲಯದಲ್ಲಿನ ಬೋರ್‌ನಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಅಲ್ಲಲ್ಲಿ ಪೈಪ್‌ಲೈನ್ ಶಿಥಿಲವಾಗಿದೆ. ಇದರಿಂದ ಗ್ರಾಮಕ್ಕೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಗ್ರಾಮಸ್ಥರು ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಿ ಎದುರಾಗಿರುವ ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಪಿಡಿಒ ಸಿದ್ದಪ್ಪ ಅವರು ಈ ಬಗ್ಗೆ ಅಗತ್ಯ ಕ್ರಮವಹಿಸಿ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ರೈತ ಮುಖಂಡರಾದ ಮರಿಯಾ ಪ್ರಕಾಶ್, ಅಂತೋಣಿ, ಮೋಹಿಶ್, ಜಸ್ಸಿ, ಸಬರಿಯಮ್ಮಾಳ್ ಇನ್ನಿತರರಿದ್ದರು.