ಕೊಳ್ಳೇಗಾಲ ಪಟ್ಟಣದ ಬಾಬಾ ಸಾಹೇಬ್ ಪ್ರತಿಮೆಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ನರೇಂದ್ರ ಮಾಲಾರ್ಪಣೆ ಮಾಡಿದರು. ರಾಜೇಂದ್ರ, ಎಸ್.ಅನಂದ ಮೂರ್ತಿ, ಪಾಪಣ್ಣ, ಜಗದೀಶ್, ಮಲ್ಲಿಕಾರ್ಜುನ್ ಇತರರು ಇದ್ದರು.
ಕೊಳ್ಳೇಗಾಲ: ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ನರೇಂದ್ರ ಅವರು ಪಟ್ಟಣದ ಬಾಬಾ ಸಾಹೇಬ್ ಪ್ರತಿಮೆಗೆ ಸೋಮವಾರ ಮಾಲಾರ್ಪಣೆ ಮಾಡಿದರು.
ನಂತರ ಉದ್ಘಾಟನೆ ಹಂತದಲ್ಲಿರುವ ಅಂಬೇಡ್ಕರ್ ಸ್ಮಾರಕ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಸರ್ಕಾರದಿಂದ ನಿಗಮಕ್ಕೆ ಹೆಚ್ಚಿನ ಅನುದಾನ ದೊರೆಯಲಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿತರಿಸಲಾಗುವುದು. ಅಂಬೇಡ್ಕರ್ ಭವನ ಪೂರ್ಣವಾಗಲು ವಿಶೇಷ ಅನುದಾನ ಕೊಡಿಸಲಾಗುವುದು. ವಿಶೇಷವಾಗಿ ಯುವಕರಿಗೆ ಇಂಟರ್ ನೆಟ್ ಮತ್ತು ಗ್ರಂಥಾಲಯವನ್ನು ನಿಗಮದಿಂದ ಕೊಡಿಸಲಾಗುವುದು. ಮುಂದಿನ ದಿನಗಳಲ್ಲಿ ನಿಗಮದಿಂದ ಹೊಸ ಯೋಜನೆ ಜಾರಿಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗಿದೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಚೇತನ್ ದೊರೈರಾಜ್, ನಗರಸಭೆ ಮಾಜಿ ಸದಸ್ಯ ಶಾಂತರಾಜು ಮುಂಡಿಗುಂಡ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಚಾಮುಲ್ ಅಧ್ಯಕ್ಷ ಮಧುವನಹಳ್ಳಿ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಚೇತನ್ ದೊರೈರಾಜ್, ನಗರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ, ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ಶಿವ ಮಲ್ಲು, ಕವಿತಾ ರಾಜೇಶ್, ನಾರಾಯಣ್, ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂ ದಮೂರ್ತಿ, ಎಂ.ಪಾಪಣ್ಣ ಇದ್ದರು.