ಅರಬಗೆರೆ ಶ್ರೀಜಂಪಾಲೆ ಮಾರಮ್ಮನ ಕುಂಭಾಭಿಷೇಕ ಮಹೋತ್ಸವದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಭಾಗಿಯಾಗಿದ್ದರು. ಜಯರಾಮು, ಕೃಷ್ಣ, ವಿಜಯಕುಮಾರ್, ಮಹದೇವ ಇತರಿದ್ದರು.  
ಚಾಮರಾಜನಗರ

ಅರಬಗೆರೆ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ.ಆರ್.ಮಂಜುನಾಥ್ ಹೇಳಿಕೆ
  • ಶ್ರೀ ಜಂಪಾಲೆ ಮಾರಮ್ಮನ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗಿ
  • ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಹನೂರು:

ಅರಬಗೆರೆ ಗ್ರಾಮದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.

ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಬಗೆರೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಜಂಪಾಲೆ ಮಾರಮ್ಮನ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗಿಯಾಗಿ ಜನರಿಂದ ಸಮಸ್ಯೆ ಆಲಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಕ್ರಮವಹಿಸಲಾಗಿದೆ. ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಸಂಬಂಧ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದು, ಕೆಲಸ ಶೀಘ್ರ ಪೂರ್ಣಗೊಳ್ಳಲಿದೆ. ಇನ್ನು ಗ್ರಾಮದಲ್ಲಿ ಕೊರತೆಯಿರುವ ರಸ್ತೆ, ಚರಂಡಿ, ವಸತಿ ಸೇರಿದಂತೆ ಇನ್ನಿತರ ಅಗತ್ಯ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮವಹಿಸಲಾಗುವುದು. ಸರ್ಕಾರಿ ಆಸ್ಪತ್ರೆಯನ್ನು ಮೇಲ್ದಜೇಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ದೊರೆತ ಕೂಡಲೇ ಕಾರ್ಯರೂಪಕ್ಕೆ ಬರಲಿದೆ ಸಎಂದು ತಿಳಿಸಿದರು.
ಮುಖಂಡರಾದ ವಿಜಯಕುಮಾರ್, ಮಂಜೇಶ್, ಬಸವೇಶ್, ಕೃಷ್ಣ, ಜಯರಾಮು, ಮಹದೇವ, ಬಸವರಾಜು, ಮಹೇಶ್, ಡಿ.ಕೆ ರಾಜು ಇತರರಿದ್ದರು.