ಹನೂರು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು. ಆರ್.ನರೇಂದ್ರ, ಈಶ್ವರ್, ನಂಜುಂಡಸ್ವಾಮಿ, ಶಿವಕುಮಾರ್ ಇತರರಿದ್ದರು.
- ಕಾಂಗ್ರೆಸ್ ಕಾರ್ಯಕರ್ತರಿಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸಲಹೆ
ಹನೂರು:
ಕಾಂಗ್ರೆಸ್ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಹೆಚ್ಚಿನ ಒತ್ತು ನೀಡುವುದರ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿ, ಹನೂರು ಕಾಂಗ್ರೆಸ್ ಭದ್ರಕೋಟೆ. ಆದರೆ ಕಳೆದ ಚುನಾವಣೆಯಲ್ಲಿ ಕೆಲ ಕಾರಣದಿಂದ ಆರ್.ನರೇಂದ್ರ ಅವರಿಗೆ ಸೋಲಾಗಿದೆ. ಆದ್ದರಿಂದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ದುೃತಿಗೆಡದೆ ಮುಂಬರುವ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಸಚಿವರಿಗೆ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸೂಚನೆ ನೀಡಿದ್ದಾರೆ. ಹಾಗಾಗಿ ಪಕ್ಷದ ಅಭ್ಯರ್ಥಿಗಳು ಸೋತಿರುವ ಕ್ಷೇತ್ರಗಳಲ್ಲಿ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟಿಸಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸದಾ ಬದ್ಧನಾಗಿರುತ್ತೇನೆ ಎಂದರು.
ಮಾಜಿ ಶಾಸಕ ಆರ್.ನರೇಂದ್ರ, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿದ್ದರಾಜು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಂದ್ರ, ತಾಲೂಕು ಅಧ್ಯಕ್ಷ ಮಾದೇಶ್, ಮುಖಂಡರಾದ ಕೊಪ್ಪಾಳಿ ಮಹದೇವನಾಯ್ಕ, ಚೇತನ್ ದೊರೆರಾಜು, ಪುಟ್ಟರಾಜು ಇತರರು ಇದ್ದರು.