ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿನಿಗೆ ಗಾಯ
ಕೊಳ್ಳೇಗಾಲ: ತಾಲೂಕಿನ ಟಗರಪುರ ಗ್ರಾಮದಲ್ಲಿ ಬೈಕ್ ಡಿಕ್ಕಿಯಾಗಿ ಶನಿವಾರ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ.
ಗ್ರಾಮದ ಸರ್ಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಧನುಶ್ರೀ(13) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ.
ಶಾಲೆ ಮುಗಿದ ನಂತರ ಸ್ನೇಹಿತರ ಜತೆ ರಸ್ತೆ ದಾಟುವಾಗ ಮೈಸೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.