ಕೊಳ್ಳೇಗಾಲದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು. ರಾಜೇಂದ್ರ, ನಂಜುಂಡಸ್ವಾಮಿ, ಪುಟ್ಟಣ್ಣ, ಗುರು ಶಾಂತಪ್ಪ ಬೆಳ್ಳುಂಡಗಿ ಕುಮಾರ್, ಮಂಜುಳಾ, ರುದ್ರಮ್ಮ ಶರಣಯ್ಯ ಇದ್ದರು.
- ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಮತ
ಕೊಳ್ಳೇಗಾಲ: ಜಗಜ್ಯೋತಿ ಬಸವಣ್ಣ ವಚನಗಳ ಮೂಲಕ ಸಮಾನತೆ ಸಾರಿದ ಮಹಾನ್ ನಾಯಕ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಸಮಾರಂಭದಲ್ಲಿ ಮಾತನಾಡಿ, ಕಾಯಕವೇ ಕೈಲಾಸ ಎಂಬುದಾಗಿ ಬಸವಣ್ಣ ಹೇಳಿದ್ದಾರೆ. ಪ್ರಸ್ತುತ ನಾವೆಲ್ಲರೂ ಎಷ್ಟರ ಮಟ್ಟಿಗೆ ಬಸವಣ್ಣ ಅವರನ್ನು ಅನುಸರಣೆ ಮಾಡುತ್ತಿದ್ದೇವೆ ಎಂಬುದನ್ನು ತಿಳಿಯಬೇಕಿದೆ. ಕಾಯಕ ನಿಷ್ಠೆ ಇದ್ದರೆ ಯಶಸ್ಸು ಸಾಧ್ಯ ಎಂದರು.
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನ ಕ್ರಾಂತಿ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಬಸವಣ್ಣರ ಅನುಭವ ಮಂಟಪದಲ್ಲಿ ಸಾಕಷ್ಟು ಸಮಾಜದ ಸುಧಾರಣೆಗೊಂಡಿತು. ಅಂಬೇಡ್ಕರ್ ಅವರು ಬಸವಣ್ಣನವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸಂವಿಧಾನ ರಚನೆ ಮಾಡಿದ್ದಾರೆ. ಸಂವಿಧಾನ ಮೂಲಕ ಸಮಾನತೆ ದೊರೆಯುತ್ತಿದೆ ಎಂದರು.
ಶರಣ ಸಾಹಿತ್ಯ ಪರಿಷತ್‌ನ ಕೊಳ್ಳೇಗಾಲ ತಾಲೂಕು ಅಧ್ಯಕ್ಷ ನಾಗರಾಜು ಎಸ್.ಕೊಂಗರಹಳ್ಳಿ ಮಾತನಾಡಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಅಖಿಲ ಭಾರತ ಲಿಂಗಾಯತ ಮಹಾಸಭೆ ತಾಲೂಕು ಅಧ್ಯಕ್ಷ ಪುಟ್ಟಣ್ಣ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಗ್ರೇಡ್ 2 ತಹಸೀಲ್ದಾರ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ ಮತ್ತಿತರರಿದ್ದರು.