ಎ.ಆರ್.ಕೃಷ್ಣಮೂರ್ತಿ 
ಚಾಮರಾಜನಗರ

ಪ್ರವಾಹ ಪೀಡಿತ ಗ್ರಾಮಗಳ ಸರ್ವೇ ಪೂರ್ಣ

ಕೊಳ್ಳೇಗಾಲ:

ಕೊಳ್ಳೇಗಾಲ ತಾಲೂಕಿನ ಪ್ರವಾಹ ಪೀಡಿತ 9 ಗ್ರಾಮಗಳ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಶ್ನಿಸಿದರು.

ವಿಧಾನ ಸಭೆ ಅಧಿವೇಶನದಲ್ಲಿ ಮಾತನಾಡಿ, ಪ್ರವಾಹದಿಂದ ಹಾನಿಗೊಳಗಾಗುವ 9 ಗ್ರಾಮಗಳಾದ ಮುಳ್ಳೂರು, ಹಳೇ ಹಂಪಾಪುರ, ದಾಸನಪುರ, ಹಳೇ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಸತ್ತೇಗಾಲ ಹಾಗೂ ಯಡಕುರಿಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆಗೆ ಈ ಹಿಂದೆ ಅನೇಕ ಬಾರಿ ಗಮನಹರಿಸಲಾಗಿತ್ತು. ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಶಾಸಕರ ಪ್ರಶ್ನೆಗೆ, ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಉತ್ತರಿಸಿ ಈ ಯೋಜನೆ ಬಗ್ಗೆ ಸರ್ವೇ ಕಾರ್ಯ ಮುಕ್ತಾಯಗೊಂಡಿದೆ. ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದು ಹಂತ ಹಂತವಾಗಿ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದರು.