ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಚಿರತೆ ಮೃತಪಟ್ಟಿದ್ದ ಪ್ರಕರಣದಲ್ಲಿ ಆರೋಪಿ ದೊರೆಸ್ವಾಮಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದು.
- ಗ್ರಾಮದ ದೊರೆಸ್ವಾಮಿ ಬಂಧಿತ
- ಚಿರತೆ ಮೃತಪಟ್ಟಿದ್ದ ಪ್ರಕರಣ
ಚಾಮರಾಜನಗರ: ತಾಲೂಕಿನ ಹೊಮ್ಮ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಚಿರತೆ ಮೃತಪಟ್ಟಿದ್ದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗ್ರಾಮದ ದೊರೆಸ್ವಾಮಿ (60) ಬಂಧಿತ. ಊರಿನ ಹೊರವಲಯದಲ್ಲಿ ಬುಧವಾರ 5-6 ವರ್ಷದ ಗಂಡು ಚಿರತೆ ಕಳೇಬರ ಪತ್ತೆಯಾಗಿತ್ತು. ಸಾವಿನ ಕುರಿತು ಅನುಮಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಚಾಮರಾಜನಗರ ಪ್ರಾದೇಶಿಕ ವಲಯ ವ್ಯಾಪ್ತಿಯಲ್ಲಿ ವನ್ಯಜೀವಿ ಅಪರಾಧ ವರದಿ ದಾಖಲಿಸಿ, ಪೋಲೀಸರ ಸಹಕಾರದೊಂದಿಗೆ ತನಿಖೆ ನಡೆಸಲಾಯಿತು. ಈ ವೇಳೆ ಆರೋಪಿ ದೊರೆಸ್ವಾಮಿಯನ್ನು ಬಂಧಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.