ಮೆದಗನಾಣೆ ಗಿರಿಜನರ ಹಾಡಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಸಮಸ್ಯೆ ಆಲಿಸಿತು. ಕೆ.ಎನ್ ಚೈತ್ರಾ, ಬಿಂದ್ಯಾ, ರಾಜೇಶ್ ಇದ್ದರು.  
ಚಾಮರಾಜನಗರ

ಉಪವಾಸನಿರತರ ಸಮಸ್ಯೆ ಆಲಿಸಿದ ತಹಸೀಲ್ದಾರ್

ಪ್ರಮುಖ ಮುಖ್ಯಾಂಶಗಳು

  • ಸತ್ಯಾಗ್ರಹ ಸ್ಥಳಕ್ಕೆ ಕೆ.ಎನ್.ಚೈತ್ರಾ ನೇತೃತ್ವದ ಅಧಿಕಾರಿಗಳ ತಂಡ ಭೇಟಿ
ಹನೂರು: ವಿದ್ಯುತ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಮೆದಗನಾಣೆ ಗಿರಿಜನರ ಹಾಡಿಯಲ್ಲಿ 4 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ತಹಸೀಲ್ದಾರ್ ಕೆ.ಎನ್.ಚೈತ್ರಾ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಸಮಸ್ಯೆ ಆಲಿಸಿತು.
ಅರಣ್ಯ ಪ್ರದೇಶದಿಂದ ಸುತ್ತುವರಿದಿರುವ ಈ ಗಿರಿಜನರ ಹಾಡಿಗೆ ವಿದ್ಯುತ್ ಸೌಕರ್ಯ ಕಲ್ಪಿಸುವ ಸಂಬಂಧ ಸೆಸ್ಕ್ ವತಿಯಿಂದ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ. ಆದರೆ ಅರಣ್ಯ ಇಲಾಖೆಯ ಅನುಮತಿ ನೀಡಿಲ್ಲ ಎಂದು ಸಂಪರ್ಕ ನೀಡಿಲ್ಲ. ಇದರಿಂದ ಬೇಸತ್ತ ಗಿರಿಜನರು ಜಿಲ್ಲಾ ಬುಡಕಟ್ಟು ಹಿತರಕ್ಷಣಾ ಸಮಿತಿ ಜತೆಗೂಡಿ 4 ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ನಡುವೆ ವೃದ್ಧರೊಬ್ಬರೂ ನಿಶ್ಯಕ್ತಿಯಿಂದ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ಕೆ.ಎನ್.ಚೈತ್ರಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ ಹಾಗೂ ತಾಲೂಕು ಅಧಿಕಾರಿ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಗಿರಿಜನರ ಸಮಸ್ಯೆ ಆಲಿಸಿದರು.
ತಹಸೀಲ್ದಾರ್ ಕೆ.ಎನ್ ಚೈತ್ರಾ ಮಾತನಾಡಿ, ಗ್ರಾಮಕ್ಕೆ ವಿದ್ಯುತ್ ಸೌಕರ್ಯ ಕಲ್ಪಿಸುವ ಸಂಬಂಧ ಶೇ.99ರಷ್ಟು ಕೆಲಸ ಮುಗಿದಿದೆ. ಸದ್ಯದಲ್ಲಿಯೇ ಸಂಪರ್ಕ ನೀಡಲಾಗುವುದು. ಆದ್ದರಿಂದ ಸತ್ಯಾಗ್ರಹವನ್ನು ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ ಇದಕ್ಕೊಪ್ಪದ ಧರಣಿ ನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕ ನೀಡುವವರೆಗೂ ಸತ್ಯಾಗ್ರಹ ಕೈ ಬಿಡುವುದಿಲ್ಲ