ಒಡೆಯರಪಾಳ್ಯದ ಟಿಬೆಟಿಯನ್ ಸೆಟಲ್‌ಮೆಂಟ್ ಕ್ಯಾಂಪ್‌ಗೆ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿ ನೀಡಿ ಪ್ರವಾಸೋದ್ಯಮ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಹದೇವಸ್ವಾಮಿ, ನಿಂಗರಾಜು ಇತರರಿದ್ದರು.
- ಜಿಲ್ಲಾಧಿಕಾರಿ ಶ್ರೀರೂಪಾ
- ಒಡೆಯರಪಾಳ್ಯದ ಟಿಬೆಟಿಯನ್ ಸೆಟಲ್‌ಮೆಂಟ್ ಕ್ಯಾಂಪ್
ಹನೂರು: ತಾಲೂಕಿನ ಒಡೆಯರಪಾಳ್ಯ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪಾ ಸೂಚಿಸಿದರು.
ತಾಲೂಕಿನ ನಿರಾಶ್ರಿತರ ತಾಣ ಒಡೆಯರಪಾಳ್ಯದ ಟಿಬೆಟಿಯನ್ ಸೆಟಲ್‌ಮೆಂಟ್ ಕ್ಯಾಂಪ್‌ಗೆ ಭಾನುವಾರ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿ ಮಾತನಾಡಿದರು. ಟಿಬೆಟಿಯನ್ ಕ್ಯಾಂಪ್‌ನಲ್ಲಿ 101 ಅಡಿ ಎತ್ತರದ ಬುದ್ಧನ ಪ್ರತಿಮೆಯನ್ನು ನಿರ್ಮಿಸುತ್ತಿರುವುದು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿದೆ. ಈಗಾಗಲೇ ಇಲ್ಲಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.
ಬಳಿಕ ತಾಲೂಕಿನ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅರ್ಧನಾರಿಪುರ ಚೆಕ್‌ಪೋಸ್ಟ್‌ಗೆ ತೆರಳಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಪ್ರತಿ ವಾಹನವನ್ನು ತಪಾಸಣೆ ನಡೆಸುವುದರ ಮೂಲಕ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು.
ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತಾಧಿಕಾರಿ ನಿಂಗರಾಜು ಹಾಗೂ ಟಿಬೆಟಿಯನ್ ಕ್ಯಾಂಪ್ ಕಚೇರಿ ಅಧಿಕಾರಿಗಳು ಇದ್ದರು.