ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣೇಶ್ ಪ್ರಸಾದ್ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.  
ಚಾಮರಾಜನಗರ

ದೇಶದ ಅಭಿವೃದ್ಧಿಗೆ ಸಂವಿಧಾನವೇ ಕಾರಣ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಿಮತ
ಗುಂಡ್ಲುಪೇಟೆ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಜತೆಗೆ ಪ್ರತಿಯೊಬ್ಬರೂ ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕು ಆಡಳಿತ ವತಿಯಿಂದ ಪಟ್ಟಣದ ಗುರುಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿರುವ ವೇಗಕ್ಕೆ ಅಂಬೇಡ್ಕರ್ ಅವರ ಸಂವಿಧಾನವೇ ಕಾರಣವಾಗಿದ್ದು ಇಡೀ ವಿಶ್ವವೇ ಯುದ್ಧಾತಂಕದಲ್ಲಿದ್ದರೂ ಭಾರತ ಮಾತ್ರ ಸುರಕ್ಷಿತವಾಗಿದೆ. ರಾಜ್ಯ ಸರ್ಕಾರವೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗೆ ತನ್ನದೇ ಆದ ಯೋಜನೆಗಳನ್ನು ಕೈಗೊಂಡಿದೆ. ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ದೇಶ ಮುನ್ನಡೆಯುತ್ತಿದ್ದು ಅವರನ್ನು ದೇಶದ ಎಲ್ಲ ಜನಾಂಗದವರೂ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು.
ತಹಸೀಲ್ದಾರ್ ಎಂ.ಎಸ್.ತನ್ಮಯಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಡಾ.ರತ್ನಮ್ಮ, ಪುರಸಭೆ ಮುಖ್ಯಾಧಿಕಾರಿ ಶರವಣ, ಮಾಜಿ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಮಾಜಿ ಸದಸ್ಯರಾದ ಮಲ್ಲರಾಜು, ರಾಜಗೋಪಾಲ, ಮುಖಂಡರಾದ ಸೋಮಣ್ಣ, ಸುಭಾಷ್ ಮಾಡ್ರಹಳ್ಳಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಇದ್ದರು.