ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣೇಶ್ ಪ್ರಸಾದ್ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. 
ಚಾಮರಾಜನಗರ

ದೇಶದ ಅಭಿವೃದ್ಧಿಯಲ್ಲಿ ಸಂವಿಧಾನದ ಪಾತ್ರ ಹಿರಿದು

ಗುಂಡ್ಲುಪೇಟೆ: ವಿಶ್ವದಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತದ ಅಭಿವೃದ್ಧಿಯಲ್ಲಿ ಸಂವಿಧಾನದ ಪಾತ್ರ ದೊಡ್ಡದಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, 1947ರಲ್ಲಿ ದೇಶಕ್ಕೆ ಸ್ವಾತಂತ್ರ ಕೊಡುವ ಸಂದರ್ಭದಲ್ಲಿ ಭಾರತ ಅದನ್ನು ಹೆಚ್ಚುಕಾಲ ಉಳಿಸಿಕೊಳ್ಳುವ ಬಗ್ಗೆ ಬ್ರಿಟಿಷರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು ಇದನ್ನು ದೇಶದಲ್ಲಿ ಅಳವಡಿಕೆ ಮಾಡಿದಾಗಿನಿಂದಲೂ ಸರ್ವ ಜನಾಂಗವನ್ನು ಸಮನಾಗಿ ಕಾಣಲಾಗುತ್ತಿದೆ ಎಂದು ಹೇಳಿದರು.
ತಹಸೀಲ್ದಾರ್ ಎಂ.ಎಸ್.ತನ್ಮಯಿ, ಮುಖ್ಯ ಭಾಷಣಕಾರ ಭೀಮನಬೀಡು ಸರ್ಕಾರಿ ಶಾಲೆಯ ಶಿಕ್ಷಕ ನಂದೀಶ್ ಸಂವಿಧಾನದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.
ಇದಕ್ಕೂ ಮೊದಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಭಾರತಾಂಬೆಯ ಭಾವಚಿತ್ರಗಳನ್ನು ವಾಹನದ ಮೇಲಿರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಾನಾ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಪೊಲೀಸರು ಆಕರ್ಷಕ ಪಥ ಸಂಚಲನ ನಡೆಸಿದರು. ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಎಚ್.ಎ.ಷಣ್ಮುಗಂ, ಬಿಇಒ ಟಿ.ಆರ್. ಸ್ವಾಮಿ, ಮಧ್ಯಾಹ್ನ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಸತೀಶ್, ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್, ಸಬ್ ಇನ್‌ಸ್ಪೆಕ್ಟರ್ ನರೇಶ್, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಪುರಸಭೆ ಮುಖ್ಯಾಧಿಕಾರಿ ಶರವಣ ಸೇರಿದಂತೆ ಹಲವರು ಇದ್ದರು.