ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಈಶ್ವರ ಉದ್ಘಾಟಿಸಿದರು. ಶ್ರೀರೂಪಾ, ಮೋನಾರೋತ್, ಎಂ.ಮುತ್ತುರಾಜು, ಸುಷ್ಮಾ, ಡಾ.ಚಿದಂಬರ, ಎಚ್.ಆರ್.ಸುರೇಶ್ ಇನ್ನಿತರರಿದ್ದರು.  
ಚಾಮರಾಜನಗರ

ಹೆಣ್ಣುಮಕ್ಕಳ ಮೇಲಿನ ತಾತ್ಸಾರಭಾವನೆ ಸಲ್ಲದು

ಪ್ರಮುಖ ಮುಖ್ಯಾಂಶಗಳು

  • ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ ಅಭಿಪ್ರಾಯ
  • ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ ಅಭಿಪ್ರಾಯ
  • ಸಾಧನೆ ಮಾಡಿದ ಹೆಣ್ಣುಮಕ್ಕಳಿಗೆ ಸನ್ಮಾನ
ಚಾಮರಾಜನಗರ: ಹೆಣ್ಣು ಮಕ್ಕಳ ಮೇಲೆ ಯಾವುದೇ ರೀತಿಯ ತಾತ್ಸಾರಭಾವನೆ ಅನುಸರಿಸದೇ ಪಾಲಕರು ಅವರಿಗೆ ಉತ್ತಮವಾದ ಶಿಕ್ಷಣವನ್ನು ನೀಡಿಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಭಿಯಾನದಡಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಸಂವಿಧಾನ ಜಾರಿಗೂ ಮುನ್ನ ಹೆಣ್ಣು ಮಕ್ಕಳನ್ನು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದರೇ ನಮ್ಮ ಸಂವಿಧಾನ ಹೆಣ್ಣು ಮಕ್ಕಳು ಮತ್ತ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಪ್ರತಿಯೊಬ್ಬರು ಯಾವುದೇ ಕಾರಣಕ್ಕೂ ಲಿಂಗ ತಾರತಮ್ಯ ಮಾಡದೇ, ಬಾಲ್ಯ ವಿವಾಹ ಮಾಡದೇ ಅವರಿಗೆ ಉನ್ನತ ಶಿಕ್ಷಣವನ್ನು ಕಲ್ಪಿಸುವ ಮೂಲಕ ಅವರ ಹಕ್ಕುಗಳನ್ನು ರಕ್ಷಣೆ ಮಾಡಬೇಕಿದೆ ಎಂದರು.
ಹೆಣ್ಣುಮಕ್ಕಳು ಓದುವ ಹಂತದಲ್ಲಿ ಯಾವುದೇ ಕಾರಣಕ್ಕೂ ಮೈಮರೆಯಬಾರದು. ಪ್ರೀತಿ, ಪ್ರೇಮಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಸಂಕೋಚವನ್ನು ಬಿಟ್ಟು ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ಮುಕ್ತವಾಗಿ ಮಾತನಾಡಬೇಕು. ಪೋಕ್ಸೋ ಕಾಯ್ದೆಯಡಿಯಲ್ಲಿ ಹೆಚ್ಚು ಯುವಕರು ಶಿಕ್ಷೆಗೆ ಗುರಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳು ಶಿಕ್ಷಣದ ಅವಧಿಯಲ್ಲಿ ಎಚ್ಚರಿಕೆ ವಹಿಸಬೇಕಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹೆಣ್ಣುಮಕ್ಕಳನ್ನು ಸನ್ಮಾನಿಸಿ, ಅವರಿಗೆ ನಗದು ಬಹುಮಾನವನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಷ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ಚಿದಂಬರ, ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ ವಿಭಾಗ) ಉಪನಿರ್ದೇಶಕಿ ಪುಟ್ಟ ಗೌರಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್.ಸುರೇಶ್ ಹಾಗೂ ಇತರರು ಹಾಜರಿದ್ದರು.