ಹನೂರಿನಲ್ಲಿ ಪ್ಲಾಸ್ಟಿಕ್ ತಪಾಸಣಾ ಚೆಕ್‌ಪೋಸ್ಟ್ ತೆರೆಯುವಂತೆ ಪರಿಸರ ವಾರಿಯರ್ಸ್‌ ಗ್ರೂಪ್‌ನ ಮಂಜುನಾಥ್ ತಹಸೀಲ್ದಾರ್ ಕೆ.ಎನ್ ಚೈತ್ರಾ ಅವರಿಗೆ ಮನವಿ ಸಲ್ಲಿಸಿದರು.  
ಚಾಮರಾಜನಗರ

ಬೆಟ್ಟಕ್ಕೆ ತೆರಳುವವರು ಪ್ಲಾಸ್ಟಿಕ್ ಬಳಕೆ ಮಾಡದಿರಿ

ಪ್ರಮುಖ ಮುಖ್ಯಾಂಶಗಳು

  • ಮೈಸೂರು ಪರಿಸರ ವಾರಿಯರ್ಸ್‌ ಗ್ರೂಪ್‌ನ ಮಂಜುನಾಥ್
  • ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರು
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಗುರುವಾರ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಮೈಸೂರು ಪರಿಸರ ವಾರಿಯರ್ಸ್‌ ಗ್ರೂಪ್‌ನ ಮಂಜುನಾಥ್ ಜನರಲ್ಲಿ ಅರಿವು ಮೂಡಿಸಿದರು.
ಮ.ಬೆಟ್ಟ ಧಾರ್ಮಿಕ ಪುಣ್ಯ ಸ್ಥಳವಾಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಹಾಗಾಗಿ, ಇಲ್ಲಿ ಪಾವಿತ್ರೃತೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ. ಈ ದಿಸೆಯಲ್ಲಿ ಮ.ಬೆಟ್ಟವನ್ನು ಪ್ಲಾಸ್ಟಿಕ್‌ಮುಕ್ತ ಪ್ರದೇಶವಾಗಿ ಘೋಷಿಸಿದೆ. ಆದರೂ ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ಮಾತ್ರ ಬಿಟ್ಟಿಲ್ಲ. ಅರಣ್ಯ ಪ್ರದೇಶದ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಇದರಿಂದ ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆಯಾಗಲಿದೆ. ಈ ದಿಸೆಯಲ್ಲಿ ಕಳೆದ 9 ವರ್ಷದಿಂದ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಈ ಬಗ್ಗೆ ಮನದಟ್ಟು ಮಾಡಿಕೊಂಡು ಮ.ಬೆಟ್ಟಕ್ಕೆ ತೆರಳುವ ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದಂತೆ ಅರಿವು ಹೊಂದಬೇಕು ಎಂದು ಮಂಜುನಾಥ್ ಹೇಳಿದರು.
ಇನ್ನು ಮಹಾಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸುತ್ತಿದ್ದು, ನೀರಿನ ಬಾಟಲಿಗಳನ್ನು ಅರಣ್ಯ ಪ್ರದೇಶದಲ್ಲಿ ಬಿಸಾಡುತ್ತಿದ್ದಾರೆ. ಇದರಿಂದ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ತರಲಿದೆ. ಆದ್ದರಿಂದ ಪಾಸ್ಟಿಕ್ ನೀರಿನ ಬಾಟಲಿ ಬದಲಾಗಿ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಬೇಕು. ಜತೆಗೆ ಭಕ್ತರಿಗೆ ಊಟ, ತಿಂಡಿ ಹಾಗೂ ಇತರ ಆಹಾರ ಪದಾರ್ಥಗಳನ್ನು ನೀಡುವ ದಾನಿಗಳು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದರು.
ಚೆಕ್‌ಪೋಸ್ಟ್ ತೆರೆಯುವಂತೆ ಮನವಿ: ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನಲೆ ಪ್ಲಾಸ್ಟಿಕ್ ವಸ್ತುಗಳನ್ನು ತಡೆಯುವ ಸಂಬಂಧ ಹನೂರಿನಲ್ಲಿ ಪ್ಲಾಸ್ಟಿಕ್ ತಪಾಸಣಾ ಚೆಕ್‌ಪೋಸ್ಟ್ ತೆರೆಯುವಂತೆ ಮಂಜುನಾಥ್ ಅವರು ತಹಸೀಲ್ದಾರ್ ಕೆ.ಎನ್ ಚೈತ್ರಾ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಚೈತ್ರಾ ತಿಳಿಸಿದರು.