ಪೊಲೀಸರು ಕಾರ್ಯಾಚರಣೆ 
ಚಾಮರಾಜನಗರ

ಜೂಜಾಡುತ್ತಿದ್ದ ಮೂವರನ್ನು ಬಂಧನ

ಲೋಕೇಶ್ ಮನು. ಡಿ
ಗುಂಡ್ಲುಪೇಟೆ: ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ಮೂವರನ್ನು ಬಂಧಿಸಿ, ಪಣಕ್ಕಿಟ್ಟಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ನೇನೆಕಟ್ಟೆ ಹೊರವಲಯದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದರು.
ಈ ವೇಳೆ ಇರ್ಫಾನ್ ಖಾನ್ ಮತ್ತು ಇಬ್ಬರು ಸಂಗಡಿಗರನ್ನು ವಶಕ್ಕೆ ಪಡೆದು ಪಣಕ್ಕಿಟ್ಟಿದ್ದ, 31 ಸಾವಿರ ರೂ. ನಗದು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.