ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದ ರಸ್ತೆ ಅಪಘಾತ ಸ್ಥಳಕ್ಕೆ ಮುತ್ತುರಾಜ್ ಭೇಟಿ ನೀಡಿ ಪರಿಶೀಲಿಸಿದರು.
ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ಬುಧವಾರ ರಾತ್ರಿ ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರೂ ಸಾವಿಗೀಡಾಗಿದ್ದಾರೆ.
ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಕಾರ್ತಿಕ್(24), ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮದ ದಿವಾಕರ್(18) ಹಾಗೂ ಬೇಗೂರು ಗ್ರಾಮದ ಮಹದೇವಪ್ರಸಾದ್(20) ಮೃತರು.
ಕಾರ್ಯನಿಮಿತ್ತ ಬೇಗೂರಿಗೆ ಬಂದಿದ್ದ ಮೂವರು ಬುಧವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಒಂದೇ ಬೈಕಿನಲ್ಲಿ ಗ್ರಾಮದದಿಂದ ಮೈಸೂರಿನತ್ತ ಹೋಗುತ್ತಿದ್ದಾಗ ಎದುರಿನಿಂದ ಕೇರಳಕ್ಕೆ ಹೋಗುತ್ತಿದ್ದ ಉತ್ತರ ಪ್ರದೇಶ ಮೂಲದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದರೆ ಮತ್ತೊಬ್ಬ ಆಸ್ಪತ್ರೆಗೆ ಹೋಗುವ ಮಾರ್ಗದಲಿ ್ಲಮೃತರಾದರು.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಹಾಗೂ ಡಿವೈಎಸ್‌ಪಿ ಸ್ನೇಹಾರಾಜ್ ಭೇಟಿ ನೀಡಿ ಪರಿಶೀಲಿಸಿದರು.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದ ರಸ್ತೆ ಅಪಘಾತ ಸ್ಥಳಕ್ಕೆ ಮುತ್ತುರಾಜ್ ಭೇಟಿ ನೀಡಿ ಪರಿಶೀಲಿಸಿದರು.