ಗುಂಡ್ಲುಪೇಟೆ: ತಾಲೂಕಿನ ಮಾಡ್ರಹಳ್ಳಿ ಬಳಿ ಜ.28 ರಂದು ಜಿಲ್ಲೆಯಲ್ಲಿಯೇ ಮೊದಲನೆಯದಾದ ಅಂಗಾಂಶ ಬಾಳೆ ಸಸಿ ತಯಾರಿಕಾ ಮತ್ತು ಮಾರಾಟ ಘಟಕ ಆರಂಭಿಸಲಾಗುತ್ತಿದೆ.
ಪ್ರಗತಿಪರ ರೈತರ ಬಸವಣ್ಣ ಅವರ ತೋಟದಲ್ಲಿ ಸ್ಥಾಪಿಸಿರುವ ಬಯೋ-ಟೆಕ್ ಲ್ಯಾಬ್ ಮತ್ತು ನರ್ಸರಿಯನ್ನು ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಪಡಗೂರು ಅಡವಿ ಮಠಾಧೀಶ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ಶ್ರೀ ಮೂಡುಗೂರು ಮಠಾಧೀಶ ಇಮ್ಮಡಿ ಉದ್ದಾನ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠಾಧೀಶ ಶ್ರೀ ಚನ್ನಬಸವ ಸ್ವಾಮೀಜಿ, ಮರಿಯಾಲ ಮಠಾಧೀಶ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ, ಮುಡುಕನಪುರ ಮಠಾಧೀಶ ಶ್ರೀ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಕಬ್ಬಹಳ್ಳಿ ಮಠಾಧೀಶ ಶ್ರೀ ಗುರುಸಿದ್ದ ಸ್ವಾಮೀಜಿ, ಹಂಗಳ ಪಟ್ಟದಮದ ಶ್ರೀ ಷಡಕ್ಷರ ಸ್ವಾಮೀಜಿ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಮಾಜಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್, ಸಾಮೂಹಿಕ ನಾಯಕತ್ವದ ರೈತ ಸಂಘದ ನಾಯಕ ಚುಕ್ಕಿ ನಂಜುಂಡಸ್ವಾಮಿ ಹಾಗೂ ಹೊನ್ನೂರು ಪ್ರಕಾಶ್ ಭಾಗವಹಿಸಲಿದ್ದಾರೆ. ಆದ್ದರಿಂದ ಬಾಳೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.