ಮಲೆಮಹದೇಶ್ವರಬೆಟ್ಟದ ತಾಳುಬೆಟ್ಟದ ಮಾರ್ಗದಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು ಜಖಂಗೊಂಡಿರುವುದು.  
ಚಾಮರಾಜನಗರ

ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ಕಾರುಗಳು ಜಖಂ

ಪ್ರಮುಖ ಮುಖ್ಯಾಂಶಗಳು

  • ಮ.ಬೆಟ್ಟದ ತಾಳುಬೆಟ್ಟ ಮಾರ್ಗದಲ್ಲಿ ಅಪಘಾತ

ಹನೂರು:

ತಾಲೂಕಿನ ಮಲೆಮಹದೇಶ್ವರಬೆಟ್ಟದ ತಾಳುಬೆಟ್ಟ ಮಾರ್ಗದಲ್ಲಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎರಡು ಪ್ರತ್ಯೇಕ ಪ್ರಕರಣದಲ್ಲಿ ಕಾರುಗಳು ಜಖಂಗೊಂಡಿವೆ.

ಮೈಸೂರಿನ ರಾಜೇಶ್ ಅವರು ಬೆಳಗ್ಗೆ ಮ.ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಆನೆಹೊಲದ ತಿರುವಿನಲ್ಲಿ ಬ್ರೇಕ್ ವಿಫಲವಾದ ಪರಿಣಾಮ ಕಾರು ಅರಣ್ಯ ಪ್ರದೇಶದತ್ತ ನುಗ್ಗಿದ್ದರೆ, ಮತ್ತೊಂದು ಘಟನೆಯಲ್ಲಿ ಮೈಸೂರಿನ ರವಿಕುಮಾರ್ ಅವರು ಇದೇ ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಪರಿಣಾಮ ಕಾರು ತಡೆಗೋಡೆಗೆ ಡಿಕ್ಕಿ ಹೊಡಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ 2 ಕಾರುಗಳು ಜಖಂಗೊಂಡಿವೆ. ಸ್ಥಳಕ್ಕೆ ಮ.ಬೆಟ್ಟ ಪೊಲೀಸರು ತೆರಳಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.