ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಜೆ. ಶಕೀಲ್ ಅಹಮ್ಮದ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯಳಂದೂರು: ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಅಗರ-ಮಾಂಬಳ್ಳಿ, ಗೌಡಹಳ್ಳಿ. ಹೊನ್ನೂರು ಸಾರ್ವಜನಿಕ ಆಸ್ಪತ್ರೆ, ತಾಲೂಕಿನ ಅಂಗನವಾಡಿ ಕೇಂದ್ರಗಳು, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಜಾಗಗಳಲ್ಲಿ ಪಲ್ಸ್ ಪೊಲೀಯೋ ಲಸಿಕೆಯ ಬೂತ್‌ಗಳನ್ನು ಮಾಡಲಾಗಿತ್ತು. ಆರೋಗ್ಯ ಇಲಾಖೆಯ ದಾದಿಯರು, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಈ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 5 ವರ್ಷದ ಮಕ್ಕಳಿಗೆ ಪೊಲೀಯೋ ಲಸಿಕೆಯನ್ನು ಹಾಕಲಾಯಿತು.