auto 
ಚಾಮರಾಜನಗರ

ಆಟೋ ಮಗುಚಿ ಇಬ್ಬರಿಗೆ ಗಾಯ

ಹನೂರು: ತಾಲೂಕಿನ ಕೌದಳ್ಳಿ ಗ್ರಾಮದ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿದ ಆಟೋ ಮಗುಚಿ ಇಬ್ಬರು ಗಾಯಗೊಂಡಿದ್ದಾರೆ.
ಮೈಸೂರಿನ ಹರೀಶ್ ಹಾಗೂ ನರೇಶ್ ಗಾಯಗೊಂಡವರು. ಈ ಇಬ್ಬರು ಬೆಳಗ್ಗೆ ಆಟೋದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಕೌದಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಳಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಆಟೋ ರಸ್ತೆ ಬದಿಗೆ ಮಗುಚಿದೆ. ಪರಿಣಾಮ ಇಬ್ಬರು ಗಾಯಗೊಂಡರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಕೌದಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.