ಗುಂಡ್ಲುಪೇಟೆ ತಾಲೂಕು ಕಗ್ಗಳದಹುಂಡಿ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಗೇಂದ್ರ, ಸುದರ್ಶನ್, ಸವಿತಾ ಇದ್ದರು. 
ಚಾಮರಾಜನಗರ

ಮಲೇರಿಯಾ ತಡೆಗೆ ಸೊಳ್ಳೆ ನಿರೋಧಕಗಳನ್ನು ಬಳಸಿ

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಗ್ಗಳದಹುಂಡಿ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ ಮಾತನಾಡಿ, ಸೋಂಕಿತ ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಚಳಿ, ಜ್ವರ ಲಕ್ಷಣಗಳು ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ. ಸಂಪೂರ್ಣ ಚಿಕಿತ್ಸೆಯಿಂದ ಮಲೇರಿಯಾ ಗುಣಪಡಿಸಬಹುದು. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ. ನೀರಿನ ಸಂಗ್ರಹಗಳನ್ನು ಭದ್ರವಾಗಿ ಮುಚ್ಚಿಡುವುದು, ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸುವಂತೆ ಸಲಹೆ ನೀಡಿದರು. ಮಕ್ಕಳಿಗೆ ಲಾರ್ವಾ ಮೀನುಗಳ ಪ್ರಾತ್ಯಕ್ಷಿತೆ ತೋರಿಸಲಾಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ಸುದರ್ಶನ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸವಿತಾ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಇದ್ದರು.