ಚಾಮರಾಜನಗರ ತಾಲೂಕಿನ ಕುದೇರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. ಶಿವಕುಮಾರ್, ಶಿವನಾಗು, ಶ್ರೀಕಂಠಸ್ವಾಮಿ, ಭರತ್, ಕೃಷ್ಣರಾಜು ಇತರರು ಇದ್ದರು.
- ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪ
- ಗ್ರಾಮದ ಮುಖಂಡರ ಆಕ್ರೋಶ
ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ವಿರುದ್ಧ ಬುಧವಾರ ಪ್ರತಿಭಟನೆ ನಡೆಯಿತು.
ಗ್ರಾ.ಪಂ ಕಚೇರಿ ಮುಂಭಾಗ ಜಮಾಯಿಸಿದ ಮುಖಂಡರು, ಪಿಡಿಒ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಮಸ್ಥ ಶಿವಕುಮಾರ್ ಮಾತನಾಡಿ, ಗ್ರಾಮದಲ್ಲಿ ಹಲವು ಸಮಸ್ಯೆಗಳು ಇದ್ದರೂ ಪಿಡಿಒ ಅವರಿಂದ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು. ಗ್ರಾಮಸ್ಥರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು. ಶಿವನಾಗು, ಶ್ರೀಕಂಠಸ್ವಾಮಿ, ಭರತ್, ಕೃಷ್ಣರಾಜು, ಮುರುಗೇಶ್, ನಟಶೇಖರ್, ಸಿದ್ದರಾಜು ಇತರರು ಭಾಗವಹಿಸಿದ್ದರು.