ತೆಂಗಿನ ಮರ 
ಚಾಮರಾಜನಗರ

ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು

ಲಲಾಟಾಕ್ಷ ಎಸ್
ಹನೂರು: ತಾಲೂಕಿನ ವಡಕೆಹಳ್ಳ ಗ್ರಾಮದ ಜಮೀನಿನಲ್ಲಿ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಕೂಲಿ ಕಾರ್ಮಿಕ ಗುರುವಾರ ಮೃತಪಟ್ಟಿದ್ದಾರೆ.
ಗ್ರಾಮದ ಆರ‌್ಮುಗಂ ಎಂಬುವವರ ಪುತ್ರ ಪೆರಿಯಸ್ವಾಮಿ (37) ಮೃತ. ಜೂ.6 ರಂದು ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ತೆಂಗಿನ ಕಾಯಿ ಕೀಳಲು ಮರವನ್ನು ಹತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು. ಕುಟುಂಬಸ್ಥರು ಕೌದಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
ವೈದ್ಯರ ಸಲಹೆ ಮೇರೆಗೆ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ತಂದೆ ಆರ‌್ಮುಗಂ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.