ಯಳಂದೂರು ಪಟ್ಟಣ ಪಂಚಾಯಿತಿಯ ಬಳಿ ಇರುವ ಉದ್ಯಾನದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಹಸೀಲ್ದಾರ್ ಎಸ್.ಎಲ್.ನಯನಾ ಗಿಡಗಳನ್ನು ನೆಟ್ಟರು, ಮುಖ್ಯಾಧಿಕಾರಿ ಎನ್.ಮಹೇಶ್‌ಕುಮಾರ್, ಆರೋಗ್ಯಾಧಿಕಾರಿ ರಾಘವೇಂದ್ರ ಇದ್ದರು. 
ಚಾಮರಾಜನಗರ

ಯಳಂದೂರಿನ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

ಯಳಂದೂರು: ಪಟ್ಟಣವೂ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಪಟ್ಟಣ ಪಂಚಾಯಿತಿ ವತಿಯಿಂದ ಪಂಚಾಯಿತಿಯ ಪಕ್ಕದಲ್ಲಿರುವ ಉದ್ಯಾನದಲ್ಲಿ ಗಿಡಗಳನ್ನು ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಎಸ್.ಎಲ್.ನಯನಾ ಅವರು ನೆಡುವ ಮೂಲಕ ಪರಸರ ದಿನವನ್ನು ಆಚರಿಸಲಾಯಿತು.
ಪಪಂ ಮುಖ್ಯಾಧಿಕಾರಿ ಎನ್.ಮಹೇಶ್‌ಕುಮಾರ್ ಮಾತನಾಡಿ, ಇಂದು ವಿಶ್ವದಲ್ಲಿ ಜಾಗತಿಕ ತಾಪಮಾನ ಏರುತ್ತಿದೆ. ಈ ವರ್ಷ ನಮ್ಮ ದೇಶವೂ ಸೇರಿದಂತೆ ಅನೇಕ ದೇಶಗಳು ಜಾಗತಿಕ ತಾಪಮಾನದ ಪರಿಣಾಮವನ್ನು ಎದುರಿಸಿವೆ. ಭಾರತದಲ್ಲೂ 52 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿದ್ದು ಇದು ಮನುಷ್ಯ ಪ್ರಕೃತಿಯ ಮೇಲೆ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯದ ಪ್ರತೀಕವಾಗಿದೆ. ನಾವು ಅಭಿವೃದ್ಧಿ ಹೆಸರಿನಲ್ಲಿ ಕಾಡನ್ನು ಕಡಿದು ನಗರಗಳನ್ನು, ಪಟ್ಟಣಗಳನ್ನು ನಿರ್ಮಾಣ ಮಾಡುತ್ತಿರುವುದು, ಪರಿಸರಕ್ಕೆ ಮಾರಕವಾಗಿರುವ ವಸ್ತುಗಳನ್ನು ಬಳಕೆ ಮಾಡುತ್ತಿರುವುದು ನಿಲ್ಲಬೇಕು ಎಂದರು.
ಪಪಂ ಅರೋಗ್ಯಾಧಿಕಾರಿ ರಾಘವೇಂದ್ರ, ಮಲ್ಲಿಕಾರ್ಜುನ, ಅರವಿಂದ, ರವಿ, ಲಕ್ಷ್ಮೀ, ಜಯಲಕ್ಷ್ಮೀ, ರವಿ ಸೇರಿದಂತೆ ಅನೇಕರು ಇದ್ದರು.