ಚಾಮರಾಜನಗರದ ಶ್ರೀಸಿದ್ದಮಲ್ಲೇಶ್ವರ ಅನುಭವ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯನ್ನು ಮಹಾಸಭಾದ ಮಹಾಸಭಾದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್, ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಮೂಡ್ಲುಪುರ ನಂದೀಶ್, ಪ್ರಣಯ್, ನಿರಂಜನ್‌ಮೂರ್ತಿ, ಗುರುಸ್ವಾಮಿ, ಸಾವಿತ್ರಮ್ಮ, ಜಗದೀಶ್, ಲೋಕೇಶ್ ಶಿವಪುರ ಇತರರು ಇದ್ದರು.
- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್ ಹೇಳಿಕೆ
- ಸಂಘಟನಾತ್ಮಕ ಸಭೆ
ಚಾಮರಾಜನಗರ: ಯುವಜನರ ಹೆಚ್ಚಾಗಿ ಸಂಘಟಿತರಾಗಬೇಕು. ಸಮಾಜದ ಏಳಿಗೆಗೆ ಎಲ್ಲರೂ ಒಗ್ಗೂಡಿ ದುಡಿಯಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್ ಕರೆ ನೀಡಿದರು.
ನಗರದ ಶ್ರೀಸಿದ್ದಮಲ್ಲೇಶ್ವರ ಅನುಭವ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಒಂದು ಸಂಘಟನೆಗೆ ಸದಸ್ಯತ್ವ ಅತ್ಯಂತ ಅಗತ್ಯವಾಗಿದೆ. ನಾವು ರಾಜಕೀಯ ಮತ್ತು ಆರ್ಥಿಕವಾಗಿ ಬಲಿಷ್ಠರಾಗುವ ನಿಟ್ಟಿನಲ್ಲಿ ಯುವಕರನ್ನು ಹೆಚ್ಚು ನೋಂದಾಯಿಸಬೇಕಿದೆ. ಈ ನಿಟ್ಟಿನಲ್ಲಿ 1 ಲಕ್ಷ ಯುವಕರನ್ನು ನೊಂದಾಯಿಸುವ ಸಂಕಲ್ಪ ಇಟ್ಟುಕೊಂಡಿದ್ದೇವೆ ಎಂದರು.
ನಮ್ಮ ಸಮುದಾಯದ ಯುವಕರಿಗೆ ಶಿಕ್ಷಣ, ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಮುಂದೆ ಬಂದು ಹೆಚ್ಚಿನ ಸಂಘಟಿತರಾಗಬೇಕಿದೆ. ಏನೇ ಒಂದು ಒಳ್ಳೆಯ ಕೆಲಸ ಮಾಡಬೇಕಿದ್ರು ಒಂದು ಗುರಿ ಮತ್ತು ಉದ್ದೇಶ ಇರಬೇಕು ಯುವಕರು ಸಂಘಟನೆಯ ಬೆನ್ನೆಲುಬು. ಸಮಾಜದ ಏಳಿಗೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಲು ಯೋಜನೆಗಳನ್ನು ಹಮ್ಮಿಕೊಳ್ಳಬೇಕು, ಸದಸ್ಯತ್ವ ಅಭಿಯಾನ ಮಾಡಬೇಕು, ಮಹಸಭಾದ ಆಶಯಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕರೆ ನೀಡಿದರು.
ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ್ ಅಬ್ಬಿಗೆರೆ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಯುವ ಘಟಕವನ್ನು ಮತ್ತಷ್ಟು ಬಲಪಡಿಸಬೇಕು,ನಾವೆಲ್ಲರೂ ಒಳ್ಳೆಯ ಸಮಾಜವನ್ನು ಕಟ್ಟಬೇಕು ಇದಕ್ಕೆ ಮಹಿಳೆಯರು ಮಕ್ಕಳು ಯುವಕರನ್ನು ಸಂಪೂರ್ಣವಾಗಿ ಒಗ್ಗೂಡಿಸಿ ಮುಂದೆ ಕರೆದುಕೊಂಡು ಹೋಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕವಾಗಿ ಎಲ್ಲಾ ಕ್ಷೇತ್ರದಲ್ಲಿ ಯುವಕರಿಗೆ ಮಾರ್ಗದರ್ಶನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಕಾಡ ಅಧ್ಯಕ್ಷ ಮರಿಸ್ವಾಮಿ ಮಾತನಾಡಿ ನಮ್ಮ ಜೆಲ್ಲಿಯಿಂದಲೇ ಸದಸ್ಯತ್ವ ಅಭಿಯಾನ ಮಾಡುತ್ತಿರುವುದು ಖುಷಿ ತಂದಿದೆ ಜೊತೆಗೆ ನಮ್ಮೆಲ್ಲ ಗೆಲುವಿಗೆ ಯುವಕರೇ ಶಕ್ತಿ ಅವರನ್ನು ನಾವು ಸಂಘಟನೆಯ ಬಗ್ಗೆ ಮಾಹಿತಿ ತಿಳಿಸಿ ಸಂಘಟಿಸಿ ಬಸವ ತತ್ವವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಮೂಡ್ಲಪುರ ನಂದೀಶ್ ಮಾತನಾಡಿ, ಜಿಲ್ಲೆಯಲ್ಲಿ ಯುವ ಘಟಕವನ್ನು ತಾಲೂಕು ಮಟ್ಟದವರೆಗೂ ವಿಸ್ತರಣೆ ಮಾಡಲಾಗುವುದು. ಎಲ್ಲಾ ಯುವಕರನ್ನು ಒಗ್ಗೂಡಿಸಿ ಸಂಘಟನೆಯನ್ನು ಬಲಿಷ್ಠಗೊಳಿಸುವುದು ನಮ್ಮ ಗುರಿ ಎಂದು ಹೇಳಿದರು.
ಹರವೆ ಮಠದ ಸರ್ಪಭೂಷಣ ಸ್ವಾಮೀಜಿ ಆಶೀರ್ವಚನ ನೀಡಿ,ನಮ್ಮ ಸಂಕಲ್ಪ ನಮ್ಮ ದಾರಿ ಯ ಐದು ಆಶಯದಂತೆ ಬಸವ ತತ್ವದಂತೆ ಕಾಯಕವೇ ಕೈಲಾಸ. ಯುವಕರು ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಳಕಳಿಯನ್ನೂ ಹೊಂದಿರಬೇಕು. ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ಸಲಹೆ ನೀಡಿದರು.
ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ ಮಾತನಾಡಿ, ನಮ್ಮ ಸಮುದಾಯದ ಯುವಕರ ಆರ್ಥಿಕ, ಸಾಮಾಜಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮಹಾಸಭಾವನ್ನು ಸ್ಥಾಪಿಸಲಾಗಿದೆ. ಪ್ರತಿಯೊಬ್ಬರು ಸ್ವಾರ್ಥವನ್ನು ಬಿಟ್ಟು ಸಮುದಾಯವನ್ನು ಕಟ್ಟಬೇಕಿದೆ. ಪ್ರಸ್ತುತ ರಾಜ್ಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯ ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿಯುವ ಹಂತಕ್ಕೆ ತಲುಪಿದ್ದೇವೆ. ಈ ನಿಟ್ಟಿನಲ್ಲಿ ಯುವಕರನ್ನು ನಾವು ಸಂಘಟಿತರಾಗಬೇಕಿದೆ ಎಂದರು.
ಮಹಾಸಭಾ ಯುವ ಘಟಕದ ಕಾರ್ಯದರ್ಶಿ ಪ್ರಣಯ್ ಮಾತನಾಡಿ, ಯಾವುದೇ ಸಂಘಟನೆ ಸದೃಢವಾಗಬೇಕಾದರೇ ಸದಸ್ಯರ ಸಂಖ್ಯೆ ಹೆಚ್ಚಾಗಿರಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲು ಎಲ್ಲರೂ ಶ್ರಮಿಸಬೇಕಿದೆ. ಇದರೊಟ್ಟಿಗೆ ಬಸವ ತತ್ವ ಪ್ರಚಾರವನ್ನು ಮಾಡಬೇಕಾಗಿದೆ. ಕಾಲೇಜು ವಿದ್ಯಾರ್ಥಿ ವೇದಿಕೆಗಳನ್ನು ಪ್ರಾರಂಭ ಮಾಡಬೇಕಿದೆ. ಮಹಿಳಾ ಘಟಕದ ಸಬಲೀಕರಣಕ್ಕೂ ಹೆಚ್ಚಿನ ಒತ್ತು ನೀಡಬೇಕಿದೆ. ಈ ಮೂಲಕ ಸಮಾಜ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದರು.
ಮಹಾಸಭಾದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಿದೆ. ಸಂಘಟನೆ ಸೇವೆಯ ಜೊತೆಗೆ ಆರ್ಥಿಕವಾಗಿ ಸದೃಢವಾಗಬೇಕಿದೆ. ಅಖಂಡ ವೀರಶೈವ ಲಿಂಗಾಯತ ಮಹಾಸಭಾದ ಅಡಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕಿದೆ. ಈ ದೃಷ್ಟಿಯಲ್ಲಿ ಸಮಾಜಕ್ಕೆ ಪ್ರತಿಯೊಬ್ಬರು ಬೆಂಬಲವಾಗಿ ನಿಲ್ಲಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರಂಜನ್‌ಮೂರ್ತಿ, ರಾಷ್ಟ್ರೀಯ ಯುವ ಘಟಕದ ಕಾರ್ಯದರ್ಶಿ ಪ್ರಣಯ್, ಕೋಶಾಧ್ಯಕ್ಷ ಕೊತ್ತಲವಾಡಿ ಗುರುಸ್ವಾಮಿ, ನಿರ್ದೇಶಕಿ ಸಾವಿತ್ರಮ್ಮ, ಉಪಾಧ್ಯಕ್ಷ ಜಗದೀಶ್, ಲೋಕೇಶ್ ಶಿವಪುರ, ಬಿಸಲವಾಡಿ ಉಮೇಶ್, ಕೋಡಿಮೋಳೆ ರಾಜಶೇಖರಮೂರ್ತಿ ಹಾಗೂ ಇತರರು ಹಾಜರಿದ್ದರು.