ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ-776ರಲ್ಲಿ ಪರ್ಮಿಟ್ ಇಲ್ಲದೆ ಓವರ್ಲೋಡ್ ಕಲ್ಲು ಸಾಗಣೆ ಮಾಡುತ್ತಿದ್ದ ಟಿಪ್ಪರ್ ಅನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪಟ್ಟಣ ವ್ಯಾಪ್ತಿಯಲ್ಲಿ ಅಧಿಕ ಭಾರ ಹೊತ್ತು ಪರ್ಮಿಟ್ ಇಲ್ಲದೆ ಸಂಚರಿಸುತ್ತಿದ್ದ ಭೂ ವಿಜ್ಞಾನಿ ಉಮೇಶ್ ನೇತೃತ್ವದ ತಂಡ ಶುಕ್ರವಾರ ತನಿಖೆ ನಡೆಸಿದಾಗ ಪರ್ಮಿಟ್ ಇಲ್ಲದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದಾರೆ.