ಯಳಂದೂರು ತಾಲೂಕಿ ಬಿಳಿಗಿರಿರಂಗಬೆಟ್ಟದಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ರವಿ, ಬಂಗಾರು, ಭಾಗ್ಯಮ್ಮ, ಸರಸ್ವತಿ, ನಿಂಗರಾಜಮ್ಮ ಇತರರಿದ್ದರು. 
ಚಾಮರಾಜನಗರ

ಕುಡಿಯುವ ನೀರು ಪೂರೈಕೆ ಸ್ಥಗಿತ

Drinking water supply suspended

ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಕಲ್ಯಾಣಿ ಕಾಲೊನಿ, ಜನತಾ ಬಡಾವಣೆ, ರಥದ ಬೀದಿ ಸೇರಿದಂತೆ ನೂರಾರು ಮನೆಗಳಿಗೆ ಕಳೆದ ಒಂದು ವಾರದಿಂದ ಕುಡಿಯುವ ನೀರು ಪೂರೈಕೆ ಇಲ್ಲದೆ ತೀವ್ರ ತೊಂದರೆ ಉಂಟಾಗಿದ್ದು, ಈ ಬಗ್ಗೆ ಪಿಡಿಒ ಗಮನ ನೀಡುತ್ತಿಲ್ಲ ಎಂದು ಆರೋಪಿಸಿ ಗುರುವಾರ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.

ಬಿಳಿಗಿರಿರಂಗನಬೆಟ್ಟದ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಮನೆಗಳಿಗೆ ಕುಡಿಯುವ ನೀರುಬರದೆ ಒಂದು ವಾರ ಕಳೆದಿದೆ. ಇರುವ ಎರಡು ಕೊಳವೆ ಬಾವಿಯಲ್ಲೂ ನೀರಿನ ಪ್ರಮಾಣ ಕಡಿಮೆಯಾಗಿದೆ. ಟ್ಯಾಂಕರ್ ಮೂಲಕವೂ ನೀರು ಪೂರೈಕೆ ಮಾಡುತ್ತಿಲ್ಲ. ಈ ಬಗ್ಗೆ ಪಿಡಿಒ ಅವರು ಜನರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಸಾಕಷ್ಟು ಬಾರಿ ಸಮಸ್ಯೆಗಳ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಆಕ್ರೋಶಗೊಂಡ 50ಕ್ಕೂ ಹೆಚ್ಚು ಮಹಿಳೆಯರು ಹಾಗೂ ಪುರುಷರು ಸೇರಿ ಗುರುವಾರ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಖಾಲಿ ಕೊಡ, ಬಿಂದಿಗೆಗಳನ್ನು ಇಟ್ಟು ಪಿಡಿಒ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಕಾಡಿನಲ್ಲಿ ಹರಿಯುವ ಕೊಳದ ನೀರನ್ನು ಕುಡಿಯ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಕ್ಕೆ 2 ಕಿ.ಮೀ. ನಡೆದು ನೀರು ತರಬೇಕಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು, ಅಡುಗೆ ಮಾಡಲು ನೀರಿಲ್ಲ. ಪಂಚಾಯಿತಿಯವರು ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಹಾಗೂ ಹೊಸ ಕೊಳವೆಬಾವಿ ಕೊರೆಸಬೇಕು ಎಂದು ಪ್ರತಿಭಟನಾಕಾರರಾದ ಆಗ್ರಹಿಸಿದರು.

ಗ್ರಾಮಸ್ಥರಾದ ಶ್ರೀನಿವಾಸ್, ನಾಗೇಂದ್ರ, ನಾಗರಾಜು, ಪ್ರತೀಪ್ ಕುಮಾರ್, ಸತ್ಯರಾಜು, ರವಿ, ಬಂಗಾರು, ಭಾಗ್ಯಮ್ಮ, ಸರಸ್ವತಿ, ನಿಂಗರಾಜಮ್ಮ, ಸೇರಿದಂತೆ ಇತರರು