ಚಾಮರಾಜನಗರ

ಮೂಲಸೌಕರ್ಯ ಒದಗಿಸಲು ಒತ್ತಾಯ

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯ ಸರಿ ಹೋಗಬೇಕು ಎಂದು ಒತ್ತಾಯಿಸಿದರು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭೀಮನಬೀಡು ರಾಜು, ಮಹೇಶ್, ಕೊತ್ತಲವಾಡಿ ಮಂಜು, ಕುಂದಕೆರೆ ಪಾಲಾಕ್ಷ ಇತರರು ಇದ್ದರು.

ಚಾಮರಾಜನಗರ