ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಚಾಲನೆ ನೀಡಿದರು. ನಂಜಪ್ಪ, ಮಹೇಶ್ ಇತರರು ಇದ್ದರು.  
ಚಾಮರಾಜನಗರ

ಸೂಕ್ಷ್ಮ ಕೌಶಲದಲ್ಲಿ ವಿಶ್ವಕರ್ಮ ಮುಂಚೂಣಿ

Vishwakarma is at the forefront of intricate craftsmanship.

ಗುಂಡ್ಲುಪೇಟೆ: ಆಧುನಿಕ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ವಿಶ್ವಕರ್ಮ ಜನಾಂಗದ ಜನರು ಪರಂಪರಾಗತವಾಗಿ ಬಂದಿರುವ ಕೌಶಲಗಳನ್ನು ಕೈಬಿಡದೆ ಈಗಲೂ ಅನುಸರಿಸುತ್ತಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಬುಧವಾರ ವಿಶ್ವಕರ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಹಿಂದಿನಿಂದಲೂ ಸೂಕ್ಷ್ಮ ಹಾಗೂ ಕೌಶಲದಿಂದ ಕಾರ್ಯನಿರ್ವಹಿಸುತ್ತಿರುವ ವಿಶ್ವಕರ್ಮ ಜನಾಂಗದ ಜನರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಹಾಗಾಗಿ ನೆರವಿಗೆ ಸರ್ಕಾರ ಹಲವಾರು ಯೋಜನೆಗಳನ್ನು ನೀಡಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮದ ಮೂಲಕ ಸಾಲ, ಸೌಲಭ್ಯಗಳನ್ನು ನೀಡುತ್ತಿದ್ದು, ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್ ಇತರರು ಇದ್ದರು.