ಚಾಮರಾಜನಗರ: ತಾಲೂಕಿನ ಬಂಡಿಗೆರೆ ಗ್ರಾಮದ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಮೊದಲ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆಗಳು ಜರುಗಿದವು.
ಗ್ರಾಮದ ಮುಖ್ಯರಸ್ತೆಯಲ್ಲಿರುವ ದೇಗುಲದಲ್ಲಿ ಸಂಜೆ 5 ಗಂಟೆಗೆ ದೇವರಿಗೆ ಅಭಿಷೇಕ, ಮಹಾಮಂಗಳಾರತಿ, ಪೂಜೆ ನೆರವೇರಿತು. ವಾರ್ಷಿಕೋತ್ಸವದ ಪ್ರಯುಕ್ತ ದೇವರ ಮೂರ್ತಿಗೆ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಗ್ರಾಮಸ್ಥರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು.