ಜಿಲ್ಲೆ

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

reportermys

ಚಾಮರಾಜನಗರ: ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ನಗರದ ಶ್ರೀ ಭುವನೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪರಿಶಿಷ್ಟ ಜಾತಿ ಜಿಲ್ಲಾ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷ ಆಲೂರು ಪ್ರದೀಪ್, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಮಹದೇವಶೆಟ್ಟಿ, ಜಿಲ್ಲಾ ಪ್ರಧಾನ ಕಾಂಗ್ರೆಸ್ ಆರ್.ಮಹದೇವ್, ನಾಗರಾಜು, ಸುರೇಶ್ ಇತರರು ಹಾಜರಿದ್ದರು.