ಜಿಲ್ಲೆ

ಶಿಲ್ಪಾನಾಗ್ ನೂತನ ಡಿಸಿ

ಚಾಮರಾಜನಗರ: ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ.ಶಿಲ್ಪಾನಾಗ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರ ವರ್ಗಾವಣೆ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರಾಗಿದ್ದ ಸಿ.ಟಿ.ಶಿಲ್ಪಾ ನಾಗ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.