ಕೊಳ್ಳೇಗಾಲ: ಪ್ರತಿಯೊಬ್ಬರಿಗೂ ಕಣ್ಣಿನ ತಪಾಸಣೆ ಅತ್ಯಗತ್ಯ ಎಂದು ಎಚ್.ಕೆ.ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಕೃಷ್ಣಸ್ವಾಮಿ ಹೇಳಿದರು.
ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆಯಲ್ಲಿ ಎಚ್.ಕೆ.ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್, ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಬಡವರ ಪರ ಧ್ವನಿಯಾಗಿದ್ದ ನನ್ನ ಪತಿ ಕೃಷ್ಣಸ್ವಾಮಿರವರ ಆಶಯದಂತೆ ನೊಂದ ಕುಟುಂಬಗಳ ಪರವಾಗಿ ನಮ್ಮ ಸಂಸ್ಥೆ ಅನೇಕ ಸೇವಾಕಾರ್ಯಗಳನ್ನು ನಡೆಸಲಾಗುತ್ತಿದೆ. ಬಡವರ ಅನುಕೂಲಕ್ಕಾಗಿ ಕಳೆದ 16 ತಿಂಗಳಿಂದ ಎರಡನೇ ಭಾನುವಾರ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ನಡೆಸಲಾಗುತ್ತದೆ. ಇದರ ಉಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದವರು, ಬಡಜನರು ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಶಿಬಿರದಲ್ಲಿ 146 ಮಂದಿ ತಪಾಸಣೆಗೆ ಒಳಪಟ್ಟು, 37 ಮಂದಿ ಶಸ್ತ್ರಚಿಕಿತ್ಸೆಗಾಗಿ ಕೊಯಮತ್ತೂರು ಕಣ್ಣಾಸ್ಪತ್ರೆಗೆ ಕಳುಹಿಸಲಾಯಿತು. ಶಿಬಿರದಲ್ಲಿ ರೋಟರಿ ಮಿಡ್ ಟೌನ್ ಸಂಸ್ಥೆ ಅಧ್ಯಕ್ಷ ದಕ್ಷಿಣ ಮೂರ್ತಿ, ರೋಟರಿ ಸಂಸ್ಥೆ ಕಾರ್ಯದರ್ಶಿ ಪ್ರಸನ್ನ ಕುಮಾರ್, ಎಂಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಜೆ ಹರ್ಷ, ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ದಿವ್ಯರೋಸ್ ಮತ್ತು ಡಾ.ಎಂ.ಎನ್.ವಿಮಿಶ, ಅರವಿಂದ ಕಣ್ಣಿನ ಆಸ್ಪತ್ರೆಯ ಸಂಯೋಜಕ ವಿಜಯ್ ಕುಮಾರ್, ಸಂಸ್ಥೆ ವ್ಯವಸ್ಥಾಪಕ ರವೀಂದ್ರ, ರಾಜಶೇಖರ್, ಮೋಹನ್ ಕುಮಾರ್, ಅರುಣ್ ಹಾಗೂ ಇತರರು ಭಾಗವಹಿಸಿದ್ದರು.