ಜಿಲ್ಲೆ

ಗೂಡ್ಸ್ ವಾಹನ ಪಲ್ಟಿಯಾಗಿ 11 ಕಾರ್ಮಿಕರಿಗೆ ಗಾಯ

reportermys

ಕೊಳ್ಳೇಗಾಲ: ತಾಲೂಕಿನ ಸಿದ್ದಯ್ಯನಪುರ ಗ್ರಾಮದ ಬಳಿ ಶುಕ್ರವಾರ ರಾತ್ರಿ ಗೂಡ್ಸ್ ವಾಹನ ಪಲ್ಟಿಯಾಗಿ 11 ಕಾರ್ಮಿಕರು ಗಾಯಗೊಂಡಿದ್ದಾರೆ.


ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಮಂಜು, ಚಂದ್ರಬಾಬು, ಸಾಗರ್, ಸುರೇಶ್, ಕುಮಾರ, ಸೋಮಣ್ಣ, ಮಲ್ಲಿಕಾರ್ಜುನ, ರಾಜು, ರಮೇಶ್, ರವೀಶ್ ಹಾಗೂ ಚಾಮರಾಜು ಗಾಯಾಳುಗಳು. ಪಾಳ್ಯ ಗ್ರಾಮದಲ್ಲಿ ಗಾರೆ ಕೆಲಸ ಮುಗಿಸಿ ಹೊನ್ನೂರು ಗ್ರಾಮಕ್ಕೆ ಗೂಡ್ಸ್ ವಾಹನದಲ್ಲಿ ಹಿಂದಿರುಗುವಾಗ ಮಾರ್ಗಮಧ್ಯೆ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಪಕ್ಕದ ಜಮೀನಿನ ಕಡೆ ಉರುಳಿದೆ.

ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತೀವ್ರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಾಪತ್ತೆಯಾಗಿರುವ ಚಾಲಕನ ಪತ್ತೆಗಾಗಿ ಪೊಲೀಸರು ಕ್ರಮಕೈಗೊಂಡಿದ್ದಾರೆ.