ಜಿಲ್ಲೆ

ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2023-24ನೇ ಶೈಕ್ಷಣಿಕ ಜುಲೈ ಹಾಗೂ ಜನವರಿ ಆವೃತ್ತಿಯ ಪ್ರಥಮ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಎಸ್ಸಿ, ಬಿ.ಎಸ್.ಡಬ್ಲುೃ, ಎಂ.ಎ, ಎಂ.ಕಾಂ, ಎಂ.ಎಸ್.ಡಬ್ಲುೃ, ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ, ಎಂ.ಬಿ.ಎ, ಎಂ.ಬಿ.ಎ, ಎಂ.ಸಿ.ಎ, ಪಿಜಿ ಡಿಪ್ಲೊಮಾ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಚಾಮರಾಜನಗರ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ಶೇ.15, ಆಟೋ, ಕ್ಯಾಬ್ ಚಾಲಕರ ಮಕ್ಕಳಿಗೆ ಭೋದನಾ ಶುಲ್ಕದಲ್ಲಿ ಶೇ.30 ವಿನಾಯಿತಿ ನೀಡಲಾಗುವುದು. ಕೋವಿಡ್‌ನಿಂದ ನಿಧನ ಹೊಂದಿರುವ ಪಾಲಕರ ಮಕ್ಕಳಿಗೆ ಉಚಿತ ಪ್ರವೇಶಾತಿಗೆ ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕಚೇರಿ ಮೊ.ಸಂ: 9986564913/ 7411136301/ 8453114419 ಸಂಪರ್ಕಿಸುವಂತೆ ಮುಕ್ತ ವಿವಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.