ಜಿಲ್ಲೆ

ಅಂಗವಿಕಲರಿಗೆ ಸಲಕರಣೆ ವಿತರಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ವಿಕಲಚೇತನರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಂಗವಿಕಲರಿಗೆ ತ್ರಿಚಕ್ರ ವಾಹನ, ಇತರೆ ಸಾಧನಾ ಸಲಕರಣೆಗಳನ್ನು ವಿತರಿಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 4 ಯಂತ್ರ ಚಾಲಿತ ತ್ರಿಚಕ್ರ ವಾಹನ, 4 ಟಾಕಿಂಗ್ ಲ್ಯಾಪ್‌ಟಾಪ್ ಮತ್ತು 1 ಹೊಲಿಗೆ ಯಂತ್ರವನ್ನು ಶಾಸಕರು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ರಾಜೇಶ್, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.