ಜಿಲ್ಲೆ

ದ್ವಿಚಕ್ರ ವಾಹನಗಳಿಗೆ ಬೆಂಕಿ

ಕಿರಣ್ ಮಾದರಹಳ್ಳಿ

ಯಳಂದೂರು: ಪಟ್ಟಣದ ಮನೆಯ ಮುಂಭಾಗ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಪಟ್ಟಣದ 5ನೇ ವಾರ್ಡ್‌ನ ಎಲೇಕೇರಿ ಬಡಾವಣೆಯ ನಿವಾಸಿ ಮಹೇಶ್ ನಾಯಕ್ ಎಂಬುವರಿಗೆ ಸೇರಿದ ಎರಡು ದ್ವಿಚಕ್ರ ವಾಹನಗಳನ್ನು ಮನೆಯ ಮುಂಭಾಗ ನಿಲ್ಲಿಸುತ್ತಿದ್ದರು. ಮಂಗಳವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದಾಗ ಅಕ್ಕ ಪಕ್ಕದ ನಿವಾಸಿಗಳು ನೋಡಿ ಕೂಗಿಕೊಂಡಿದ್ದಾರೆ. ಅಷ್ಟರಲ್ಲಾಗಲೇ ಬೈಕ್ ಸುಟ್ಟು ಕರಕಲಾಗಿದ್ದವು. ಈ ಬಗ್ಗೆ ಎಸ್‌ಐ ಚಂದ್ರಹಾಸ ನಾಯಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.