ಜಿಲ್ಲೆ

20ರಿಂದ 25ರವರೆಗೆ ಆಗಮ ಪ್ರವರ, ಪ್ರವೀಣ ಪ್ರಸಿದ್ಧ ಪರೀಕ್ಷೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ 2022-23 ಮತ್ತು 2023-24ನೇ ಸಾಲಿನ ವಿವಿಧ ಆಗಮ ಪ್ರವರ ಮತ್ತು ಪ್ರವೀಣ ಪ್ರಸಿದ್ಧ ಪರೀಕ್ಷೆಗಳು ಮೇ 20 ರಿಂದ 25 ರವರೆಗೆ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಮಠದ ಶ್ರೀ ಮಲೆ ಮಹದೇಶ್ವರ ವೇದ ಆಗಮ ಪಾಠಶಾಲೆಯಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ, ಶಾಂತಿ ಸುವ್ಯವಸ್ಥೆಯಿಂದ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ರನ್ವಯ ಪರೀಕ್ಷಾ ದಿನಗಳಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೆ ಈ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚಲು ಆದೇಶಿಸಲಾಗಿದೆ.

ನಿಷೇಧಾಜ್ಞೆ ಆದೇಶವು ವಿವಿಧ ಆಗಮ ಪ್ರವರ ಮತ್ತು ಪ್ರವೀಣ ಪ್ರಸಿದ್ಧ ಪರೀಕ್ಷೆಯ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.