ಚಾಮರಾಜನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ಶೇ. 75ರಷ್ಟು ಪ್ರವೇಶ ಮೀಸಲಿರಿಸಿದೆ. ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅಂಗವಿಕಲರಿಗೆ ಶೇ. 3ರಷ್ಟು ಪ್ರವೇಶ ಮೀಸಲಿರಿಸಿದೆ. ಶೇ. 25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಪ್ರವೇಶಾತಿ ಮೀಸಲಿರಿಸಿದೆ.
ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲ ದಾಖಲೆಗಳೊಂದಿಗೆ ಹತ್ತಿರವಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಜಿಲ್ಲಾ ಅಥವಾ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಮೇ 27ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮೊ.ಸಂ 7760553146 ಕೊಳ್ಳೇಗಾಲ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 7829587596, ಯಳಂದೂರು ಮೊ.ಸಂ 9845254995, ಚಾಮರಾಜನಗರ ಮೊ.ಸಂ 9620886393, ಗುಂಡ್ಲುಪೇಟೆ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ಸಂ 8217593163 ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.