ಜಿಲ್ಲೆ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಡಾ.ಹ.ರಾ.ಮಹೇಶ್ ಗುರುವಾರ ನಾಮಪತ್ರ ಸಲ್ಲಿಸಿದರು.

ಮೈಸೂರಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಡಾ.ಜಿ.ಎಸ್.ಪ್ರಕಾಶ್ ಅವರಿಗೆ ಹ.ರಾ.ಮಹೇಶ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಮಂಡ್ಯ ಜಿಲ್ಲಾಧ್ಯಕ್ಷ ಶಿವಶಂಕರ್, ಹಿರಿಯ ಮುಖಂಡರಾದ ಮೈಸೂರಿನ ಶ್ರೀನಿವಾಶಪ್ರಸಾದ್‌ಪ್ರಸಾದ್, ಆದರ್ಶ್, ಮಹದೇವಸ್ವಾಮಿ ಇದ್ದರು.