ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3 ರಂದು ನಡೆಯಲಿದ್ದು, ಮತದಾನದ ಹಿನ್ನೆಲೆಯಲ್ಲಿ ಚುನಾವಣೆಯು ಶಾಂತ ರೀತಿಯಲ್ಲಿ ಮತ್ತು ಮುಕ್ತವಾಗಿ ನಡೆಯಲು ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಹನೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ನಗರಪ್ರದೇಶದ 5 ಕಿ.ಮೀ ವ್ಯಾಪ್ತಿಯ ಮದ್ಯದಂಗಡಿಗಳನ್ನು ಜೂ.1ರ ಸಂಜೆ 4 ಗಂಟೆಯಿಂದ ಜೂ. 3ರ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ. ಈ ದಿನಗಳಲ್ಲಿ ಮದ್ಯಮಾರಾಟ ನಿಷೇಧಿಸಿ ಒಣದಿನವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.