ಜಿಲ್ಲೆ

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಿ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಸವಿತಾ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆ ಗಮನಹರಿಸಿ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು.

ನಗರದ ರಾಮಸಮುದ್ರ ಬಡಾವಣೆಯ ಎನ್‌ಟಿಎಂ ಶಾಲೆಯ ರಸ್ತೆಯಲ್ಲಿರುವ ಸವಿತಾ ಸಮಾಜ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮುದಾಯದ ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು, ಇಲ್ಲದವರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಬಸವಣ್ಣನವರ ಅನುಭವ ಮಂಟಪದಲ್ಲಿ ಹಡಪದ ಅಪ್ಪಣ್ಣ ಕೂಡ ಸೇವೆಯನ್ನು ಸಲ್ಲಿಸಿದ್ದರು. ಇಂದು ನಾವೆಲ್ಲ ಬಸವಣ್ಣ, ಹಡಪದ ಅಪ್ಪಣ್ಣ ಅವರು ತೋರಿದ ಮಾರ್ಗದಲ್ಲಿ ನಡೆದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ವೇಳೆ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ವಿ.ವೆಂಕಟರಾಜು, ಗೌರವಾಧ್ಯಕ್ಷ ಮುದ್ದುಮಾದು, ತಾಲೂಕು ಅಧ್ಯಕ್ಷ ಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಉಪಾಧ್ಯಕ್ಷ ರಂಗಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಚಿನ್ನಸ್ವಾಮಿ, ಮುಖಂಡ ನಾಗರಾಜು, ಶ್ರೀನಿವಾಸ್, ಮಹದೇವ್, ಗೋವಿಂದರಾಜು, ಮಹದೇವ್, ರಾಮಣ್ಣ, ರಂಗಸ್ವಾಮಿ, ವಸಂತ್‌ಕುಮಾರ್, ನಾಗೇಶ್, ಮಹೇಶ್, ರವಿಕುಮಾರ್ ಉಪಸ್ಥಿತರಿದ್ದರು.