ಜಿಲ್ಲೆ

ಎರಡುದಿನ ವಿವಿಧ ಧಾರ್ಮಿಕ ಕಾರ್ಯಕ್ರಮ

ಚಾಮರಾಜನಗರ: ತಾಲೂಕಿನ ಹೆಬ್ಬಸೂರು ಗ್ರಾಮದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮೇ 19 ಮತ್ತು 20 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೇ 19 ರಂದು ಮಠದಲ್ಲಿ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. 20 ರಂದು ಶ್ರೀ ಸುಬ್ರಹ್ಮಣ್ಯ ಹೀಮ ನಡೆಯಲಿದೆ. ಬಳಿಕ ಶ್ರೀ ಶಾರದಾ ಪರಮೇಶ್ವರಿಯ ಭವ್ಯ ರಥೋತ್ಸವ ಜರುಗಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.