ಹನೂರು: ಗ್ರಾಮಸ್ಥರು ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದ ಹಿನ್ನೆಲೆಯಲ್ಲಿ ನಾನು ಮತದಾನ ಮಾಡಿರಲಿಲ್ಲ
ಮರು ಮತದಾನ ನಡೆದಾಗ ಕೆಲವರು ಮತದಾನ ಮಾಡಿದರು. ಈ ಹಿನ್ನೆಲೆಯಲ್ಲಿ ನಾನೂ ಸಹ ಮತದಾನ ಮಾಡಿದೆ ಎಂದು ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮಸ್ಥೆ ಪವಿತ್ರಾ ತಿಳಿಸಿದರು.
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಪ್ರಕರಣ ನಡೆದಿದ್ದ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ ನಮಗೆ ಮೂಲಸೌಕರ್ಯಗಳಿಲ್ಲ. ಮನೆಗಳನ್ನು ಮಣ್ಣಿನಿಂದ ಕಟ್ಟಿಕೊಂಡಿದ್ದೇವೆ. ನಮಗೆ ಸೌಲಭ್ಯ ಕಲ್ಪಿಸಿಕೊಟ್ಟರೆ ಅನುಕೂಲವಾಗುತ್ತದೆ. ಇದರಿಂದ ನಮ್ಮ ಜೀವನ ಸುಧಾರಣೆಯಾಗುತ್ತದೆ ಎಂದು ಹೇಳಿದರು.